ADVERTISEMENT

ಕನಕಪುರದ ಹೊಸದುರ್ಗ ಗ್ರಾಮ ಪಂಚಾಯಿತಿಗೆ ಗಾಂಧಿಗ್ರಾಮ ಪುರಸ್ಕಾರದ ಗರಿಮೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 6:56 IST
Last Updated 3 ಅಕ್ಟೋಬರ್ 2019, 6:56 IST
ಕನಕಪುರ ತಾಲ್ಲೂಕಿನ ಹೊಸದುರ್ಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್‌.ಎಸ್‌.ರಘು ಗಾಂಧಿ ಪುರಸ್ಕಾರವನ್ನು ಸ್ವೀಕರಿಸುತ್ತಿರುವುದು
ಕನಕಪುರ ತಾಲ್ಲೂಕಿನ ಹೊಸದುರ್ಗ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್‌.ಎಸ್‌.ರಘು ಗಾಂಧಿ ಪುರಸ್ಕಾರವನ್ನು ಸ್ವೀಕರಿಸುತ್ತಿರುವುದು   

ಕೋಡಿಹಳ್ಳಿ (ಕನಕಪುರ): ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಹೊಸದುರ್ಗ ಗ್ರಾಮ ಪಂಚಾಯಿತಿ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್‌.ಎಸ್‌.ರಘು ಮತ್ತು ಪಂಚಾಯಿತಿ ಅಧ್ಯಕ್ಷ ಎಚ್‌.ಎಂ.ಶಿವರಾಮ್‌ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಂದ ಪುರಸ್ಕಾರ ಸ್ವೀಕರಿಸಿದರು.

ರಾಜ್ಯದ 176 ತಾಲ್ಲೂಕಿನಲ್ಲಿ ಬರುವ 6,021 ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ ಅಭಿವೃದ್ಧಿಗೆ ಒತ್ತುನೀಡಿರುವ ಗ್ರಾಮ ಪಂಚಾಯಿತಿಯನ್ನು ತಾಲ್ಲೂಕಿಗೆ ಒಂದರಂತೆ ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಕನಕಪುರ ತಾಲ್ಲೂಕಿನ 43 ಗ್ರಾಮ ಪಂಚಾಯಿತಿಗಳಲ್ಲಿ ಹೊಸದುರ್ಗ ಗ್ರಾಮ ಪಂಚಾಯಿತಿ ಆಯ್ಕೆಯಾಗಿತ್ತು.

ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ನಡೆದ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಕಾರ್ಯಕ್ರಮ ಹಾಗೂ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ನೀಡಲಾಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್‌ ರಾಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ನಾಗಲಾಂಬಿಕೆ ದೇವಿ, ಉಮಾ ಮಹದೇವನ್‌ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.