ADVERTISEMENT

ಹಿಂದೂ ಮಹಾಗಣಪತಿ ಗಣೇಶೋತ್ಸವ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2024, 6:51 IST
Last Updated 17 ಸೆಪ್ಟೆಂಬರ್ 2024, 6:51 IST
ಕುದೂರು ಪಟ್ಟಣದ ಶ್ರೀ ರಾಮಲೀಲಾ ಕ್ರೀಡಾಂಗಣದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ 5 ಅಡಿ ಎತ್ತರದ ಗಣಪತಿ.
ಕುದೂರು ಪಟ್ಟಣದ ಶ್ರೀ ರಾಮಲೀಲಾ ಕ್ರೀಡಾಂಗಣದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ 5 ಅಡಿ ಎತ್ತರದ ಗಣಪತಿ.   

ಕುದೂರು: ಹಿಂದೂ ಮಹಾಗಣಪತಿ ಗಣೇಶೋತ್ಸವಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಹಿಂದೂ ಮಹಾ ಗಣೇಶೋತ್ಸವ ಸಮಿತಿ ಸದಸ್ಯರು ಮೊದಲನೇ ವರ್ಷದ ಅಂಗವಾಗಿ ಸುಮಾರು 5-6 ಅಡಿ ಎತ್ತರದ ಗಣಪತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ನೆರವೇರಿಸಿದರು. ಪಟ್ಟಣದ ಹೃದಯ ಭಾಗದ ರಾಮಲೀಲಾ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಗಣಪತಿ ಪ್ರತಿಷ್ಠಾಪನೆ ನಂತರ ಸಂಜೆ ಮಹಾಗಣಪತಿ ಹೋಮ ನಡೆಯಿತು. ಗಣೇಶೋತ್ಸವದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ತುಂಬೆಲ್ಲಾ ವಿದ್ಯುತ್ ಅಲಂಕಾರ ಮಾಡಲಾಗಿತ್ತು. ಮಂಗಳವಾರ ಸಂಜೆ ಅದ್ದೂರಿಯಾಗಿ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು ಎಂದು ಆಯೋಜಕ ಸಂಜಯ್ ತಿಳಿಸಿದರು.

ಹಿಂದೂ ಮಹಾಗಣಪತಿ ಸಮಿತಿಯ ಸದಸ್ಯರು.
ಹಿಂದೂ ಮಹಾಗಣಪತಿ ಸಮಿತಿಯ ಸದಸ್ಯರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.