ADVERTISEMENT

ಗ್ಯಾಸ್ ಪೈಪ್‌ಲೈನ್ ಅಳವಡಿಕೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 4:36 IST
Last Updated 17 ಫೆಬ್ರುವರಿ 2022, 4:36 IST
ಬಿಡದಿಯ ಮನೆಗಳಿಗೆ ಅಡುಗೆ ಅನಿಲ ಸಿಲಿಂಡರ್‌ ಸಂಪರ್ಕ ಅಳವಡಿಸುತ್ತಿರುವುದು
ಬಿಡದಿಯ ಮನೆಗಳಿಗೆ ಅಡುಗೆ ಅನಿಲ ಸಿಲಿಂಡರ್‌ ಸಂಪರ್ಕ ಅಳವಡಿಸುತ್ತಿರುವುದು   

ಬಿಡದಿ: ಪಟ್ಟಣದಲ್ಲಿ ಪ್ರತಿ ಮನೆಗೆ ಅಡುಗೆ ಅನಿಲ ಸಿಲಿಂಡರ್‌ ಸಂಪರ್ಕ ಕಲ್ಪಿಸುವ ಪೈಪ್‌ಲೈನ್ ಕಾಮಗಾರಿಯು ಶೇ 60ರಷ್ಟು ಪೂರ್ಣಗೊಂಡಿದೆ. ಇನ್ನೂ ಒಂದೆರಡು ವಾರ್ಡ್‌ಗಳಲ್ಲಿ ಜೋಡಣೆ ಕಾರ್ಯ ಮುಗಿಯಬೇಕಿದೆ.

ನಾಗರಿಕರು ಈ ಜೋಡಣೆ ಕಾರ್ಯಕ್ಕೆ ಉತ್ತಮ ಸಹಕಾರ ನೀಡುತ್ತಿದ್ದು, ಜೊತೆಗೆ ಸಂಪರ್ಕ ಒದಗಿಸುವ ಕಾರ್ಮಿಕರು ಕೂಡ ಉತ್ತಮವಾಗಿ ಸ್ಪಂದಿಸುತ್ತಿರುವುದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನೂ ಆರು ತಿಂಗಳೊಳಗೆ ಪ್ರತಿಯೊಂದು ಮನೆಗಳಿಗೂ ಗ್ಯಾಸ್ ಸಂಪರ್ಕ ಸಿದ್ಧವಾಗುತ್ತದೆ. ಪಟ್ಟಣದ 23 ವಾರ್ಡ್‌ಗಳಲ್ಲಿಯೂ ಕಾಮಗಾರಿ ಪ್ರಗತಿಯಲ್ಲಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ತ್ವರಿತವಾಗಿ ಪೂರ್ಣಗೊಳಿಸಬೇಕು ಎಂಬುದು ಜನರ ಒತ್ತಾಯ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.