ADVERTISEMENT

ರಾಮನಗರ | ರೈಲ್ವೆ ಹಳಿ ಬಳಿ ಮೂಕ ಬಾಲಕಿ ಶವ ಪತ್ತೆ: ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 12 ಮೇ 2025, 6:25 IST
Last Updated 12 ಮೇ 2025, 6:25 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಬಿಡದಿ (ರಾಮನಗರ): ಹೋಬಳಿಯ ಭದ್ರಾಪುರ ಹಕ್ಕಿ ಪಿಕ್ಕಿ ಕಾಲೊನಿ ಬಳಿಯ ರೈಲ್ವೆ ಹಳಿ ಬಳಿ 14 ವರ್ಷದ ಮೂಕ ಬಾಲಕಿಯ ಶವ ಸೋಮವಾರ ಪತ್ತೆಯಾಗಿದೆ.

ಹಂತಕರು ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿ, ಬಳಿಕ ರೈಲು ಹಳಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದಾರೆ. ಸ್ಥಳೀಯರು ಬೆಳಿಗ್ಗೆ ಶವ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು, ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ADVERTISEMENT

ಶವದ ಮೇಲೆ ಅಷ್ಟಾಗಿ ಗಾಯದ ಗುರುತುಗಳಿಲ್ಲ. ಹಾಗಾಗಿ, ಬಾಲಕಿ ರೈಲಿಗೆ ಸಿಲುಕಿ ಮೃತಪಟ್ಟಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಬಾಲಕಿ ಕೊಲೆಯಾಗಿರುವ ಸಾಧ್ಯತೆ ಇದೆ. ಬಾಲಕಿ ಕುಟುಂಬದವರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿಕೊಂಡು ಹಂತಕರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.