ADVERTISEMENT

ಕನಕಪುರ: ಶಿವನಹಳ್ಳಿ ಗ್ರಾ.ಪಂ.ಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಭೇಟಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 2:56 IST
Last Updated 31 ಅಕ್ಟೋಬರ್ 2025, 2:56 IST
ಕನಕಪುರ ಶಿವನಹಳ್ಳಿ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಹಾಗೂ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಗ್ರಂಥಾಲಯ ವೀಕ್ಷಿಸಿದರು
ಕನಕಪುರ ಶಿವನಹಳ್ಳಿ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಹಾಗೂ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ ಗ್ರಂಥಾಲಯ ವೀಕ್ಷಿಸಿದರು    

ಕನಕಪುರ: ಶಿವನಹಳ್ಳಿ ಗ್ರಾಮ ಪಂಚಾಯಿತಿಗೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಮಂಗಳವಾರ ಭೇಟಿ ನೀಡಿ ಗ್ರಂಥಾಲಯ ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಅವರು, ಜಿಲ್ಲೆಯಲ್ಲಿಯೇ ಅತ್ಯಾಧುನಿಕ ಸೌಲಭ್ಯವುಳ್ಳ ಗ್ರಂಥಾಲಯಗಳಲ್ಲಿ ಶಿವನಹಳ್ಳಿ ಗ್ರಂಥಾಲಯವು ಒಂದಾಗಿದ್ದು, ಅತ್ಯುತ್ತಮವಾಗಿ ರೂಪುಗೊಂಡಿದೆ ಎಂದರು.

ಸರ್ಕಾರ ಶಿಕ್ಷಣ ಮತ್ತು ಮಕ್ಕಳಿಗೆ ಮೊದಲ ಆದ್ಯತೆ ನೀಡಿ ಮಕ್ಕಳ ಭವಿಷ್ಯಕ್ಕೆ ಉತ್ತಮ ಅಡಿಪಾಯ ಹಾಕಬೇಕು ಎಂದರು.  

ADVERTISEMENT

ಅಜೀಂ ಪ್ರೇಮ್ ಜಿ ಫೌಂಡೇಶನ್ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓ ಅನ್ಮೋಲ್ ಜೈನ್, ಇಓ ಅವಿನಾಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ಪಿಡಿಓ ಎಸ್.ಎಂ.ಕೃಷ್ಣಮೂರ್ತಿ, ಪಂಚಾಯಿತಿ ಅಧ್ಯಕ್ಷ ವೀರಭದ್ರಯ್ಯ, ಸದಸ್ಯ ರಾಜು, ಗ್ರಂಥಾಪಾಲಕಿ ಚೈತ್ರಾ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.