ADVERTISEMENT

VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ

​ಪ್ರಜಾವಾಣಿ ವಾರ್ತೆ
Published 5 ಜುಲೈ 2025, 5:34 IST
Last Updated 5 ಜುಲೈ 2025, 5:34 IST

ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಗ್ರಾಮದ ಡಾ. ಎಚ್‌.ಎಂ. ವೆಂಕಟಪ್ಪ ಅವರ ಯಶೋಗಾಥೆ ಇದು. ಕಣ್ವ ಫೌಂಡೇಷನ್ ಅಡಿ ತಮ್ಮ ತಂದೆ–ತಾಯಿ ಹೆಸರಿನಲ್ಲಿ ‘ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಸ್ಕೂಲ್‌’ ನಿರ್ಮಾಣ ಮಾಡಿರುವ ವೆಂಕಟಪ್ಪ, ತಮ್ಮ ಬೆವರಿನ ₹14 ಕೋಟಿಯನ್ನು ಇದಕ್ಕಾಗಿ ವ್ಯಯಿಸಿದ್ದಾರೆ. ಯಾವ ಖಾಸಗಿ ಶಾಲೆಗೂ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಯಲ್ಲೂ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಕಡೆ ಗುಣಮಟ್ಟದ ಶಿಕ್ಷಣ ನೀಡಬಹುದು ಎಂದು ತೋರಿಸಿಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.