ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಶಿವಾಲ್ದಪ್ಪನಬೆಟ್ಟ (ಶಿವಗಿರಿಕ್ಷೇತ್ರ)ದಲ್ಲಿ ಗುರು ಪೂರ್ಣಿಮೆ ಪ್ರಯುಕ್ತವಾಗಿ ಶನಿವಾರ ನಂದಿ ಪೂಜೆ, ಗಣೇಶ ಹೋಮ, ಶಿವಲಿಂಗಕ್ಕೆ ಅಭಿಷೇಕ ನಡೆಸಿ ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಲಾಯಿತು.
ಕ್ಷೇತ್ರದ ಪೀಠಾಧ್ಯಕ್ಷ ಅನ್ನದಾನನಾಥ ಸ್ವಾಮಿ ಸಾನಿಧ್ಯವಹಿಸಿ ಕ್ಷೇತದಲ್ಲಿ ಎಲ್ಲಾ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿಕೊಟ್ಟರು.
ಸುತ್ತಮುತ್ತಲಿನ ಗ್ರಾಮಗಳಿಂದ ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವರ ಆರಾಧನೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.