ADVERTISEMENT

ಚನ್ನಪಟ್ಟಣ: ಜಾನಪದ ಕಲೆ ಉಳಿಸಲು ಹರೀಶ್ ಕುಮಾರ್ ಸಲಹೆ

ಮೈಲನಾಯಕನಹೊಸಹಳ್ಳಿ: ರಾಜ್ಯಮಟ್ಟದ ಗೀತ ಗಾಯನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 4:25 IST
Last Updated 29 ನವೆಂಬರ್ 2021, 4:25 IST
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಹರೀಶ್ ಕುಮಾರ್ ಉದ್ಘಾಟಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಶರತ್ ಚಂದ್ರು, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜು, ದೀಪು, ವೆಂಕಟೇಶ್, ಗೋಪಾಲಯ್ಯ ಇದ್ದರು
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಹರೀಶ್ ಕುಮಾರ್ ಉದ್ಘಾಟಿಸಿದರು. ಕಾಂಗ್ರೆಸ್ ಹಿರಿಯ ಮುಖಂಡ ಶರತ್ ಚಂದ್ರು, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜು, ದೀಪು, ವೆಂಕಟೇಶ್, ಗೋಪಾಲಯ್ಯ ಇದ್ದರು   

ಚನ್ನಪಟ್ಟಣ: ‘ಜಾನಪದ ಕಲೆಯನ್ನು ಉಳಿಸಲು ಸಂಘಸಂಸ್ಥೆಗಳು ಪ್ರಮುಖ ಪಾತ್ರ ವಹಿಸಬೇಕು. ಎಲೆಮರೆಕಾಯಂತಿರುವ ಕಲಾವಿದರನ್ನು ಮುಖ್ಯ ಭೂಮಿಕೆಗೆ ಕರೆತರುವ ಜವಾಬ್ದಾರಿಯೂ ಇದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಹರೀಶ್ ಕುಮಾರ್ ಸಲಹೆ ನೀಡಿದರು.

ತಾಲ್ಲೂಕಿನ ಮೈಲನಾಯಕನ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಾನಪದ ಹಾಗೂ ಸಾಂಸ್ಕೃತಿಕ ಕಲಾ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಕಾರದೊಂದಿಗೆ ಈಚೆಗೆ ಏರ್ಪಡಿಸಿದ್ದ ರಾಜ್ಯ ಮಟ್ಟದ ‘ಜಾನಪದ ಕಲೋತ್ಸವ ಹಾಗೂ ಗೀತಗಾಯನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಶರತ್ ಚಂದ್ರು ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಹಳ್ಳಿಗಳಲ್ಲಿಯೂ ಜಾನಪದ ಕಲೆ ನಶಿಸುತ್ತಿದೆ. ಜನರ ಜೀವನಾಡಿ ಜಾನಪದವನ್ನು ಉಳಿಸುವಲ್ಲಿ ಎಲ್ಲರ ಪಾತ್ರವೂ ಮುಖ್ಯ. ಯುವಕರು ಜಾನಪದ ಕಲೆಗಳ ಬಗ್ಗೆ ಆಸಕ್ತಿ ಮೂಡಿಸಿಕೊಳ್ಳಬೇಕು’ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜು, ದೀಪು, ವೆಂಕಟೇಶ್, ಗೋಪಾಲಯ್ಯ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗ, ಟ್ರಸ್ಟ್ ಅಧ್ಯಕ್ಷೆ ನಾಗಮ್ಮ, ಕಾರ್ಯದರ್ಶಿ ಹೊಂಬಾಳಯ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಲಾವಿದರಾದ ರಾಜಣ್ಣ, ಶೆಟ್ಟಿಹಳ್ಳಿ ಶಿವಪ್ಪ, ಕಲ್ಲಾಪುರ ಯೋಗೇಶ್, ಮಹದೇವ್, ಎ.ವಿ. ಹಳ್ಳಿ ವೆಂಕಟೇಶ್ ಗೀತಗಾಯನವನ್ನು ನಡೆಸಿಕೊಟ್ಟರು. ಜಾನಪದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.