ಸಾವು (ಪ್ರಾತಿನಿಧಿಕ ಚಿತ್ರ)
ಹಾರೋಹಳ್ಳಿ: ಮಳೆಯಿಂದ ಮನೆಯ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿಯ ಹನುಮಂತನಗರ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೆಂಪಮ್ಮ (80) ಎಂದು ಗುರುತಿಸಲಾಗಿದೆ. ಕೆಂಪಮ್ಮ ಒಬ್ಬರೇ ಮನೆಯಲ್ಲಿ ವಾಸಿಸುತ್ತಿದ್ದು, ಭಾನುವಾರ ಮಧ್ಯರಾತ್ರಿ ಸುರಿದ ಮಳೆಗೆ ಗೋಡೆ ಕುಸಿದು ಕೆಂಪಮ್ಮ ಅವರ ಮೇಲೆ ಬಿದ್ದಿದೆ. ಅವರನ್ನು ಗ್ರಾಮಸ್ಥರು ಹೊರ ತೆಗೆದಿದ್ದಾರೆ. ಆ ಹೊತ್ತಿಗೆ ಕೆಂಪಮ್ಮ ಅವರು ಮೃತಪಟ್ಟಿದ್ದಾರೆ.
ಈ ವಿಷಯ ತಿಳಿದ ಕೂಡಲೇ ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.