
ಹಾರೋಹಳ್ಳಿ: ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ವಲಸಿಗರಿದ್ದರೆ ಅಂಥವರನ್ನು ಪತ್ತೆಹಚ್ಚಿ ಕಾನೂನು ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಘಟಕದಿಂದ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ರಾಮಸಾಗರ ಕೃಷ್ಣ ಮಾತನಾಡಿ, ಹಾರೋಹಳ್ಳಿಯು ಏಷ್ಯಾದ 2ನೇ ಅತಿದೊಡ್ಡ ಕೈಗಾರಿಕಾ ಪ್ರದೇಶ. ಸಹಜವಾಗಿ ಜನಸಂಖ್ಯೆಯೂ ಹೆಚ್ಚಿದೆ. ಕೆಲವು ಕೈಗಾರಿಕೆಗಳಲ್ಲಿ ಕೆಲಸಕ್ಕೆ ಕಡಿಮೆ ಸಂಬಳ ನೀಡಿ ಆಕ್ರಮ ವಲಸಿಗರ ನಿಯೋಜನೆ ಮಾಡಿಕೊಳ್ಳಲಾಗಿದೆ. ಪೊಲೀಸರು ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ತಾಲೂಕಿನಾದ್ಯಂತ ಅಕ್ರಮ ಗುಜರಿಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇವುಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.
ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುರುಳಿಧರ್, ಶ್ರೀನಿವಾಸ್, ಸೋಮಣ್ಣ, ಚಂದ್ರಣ್ಣ, ಚಂದ್ರಹಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.