ಬಂಧನ
ಹಾರೋಹಳ್ಳಿ: ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಾನಸಿಕ ಅಸ್ವಸ್ಥ ಯುವತಿ ಮೇಲೆ ಸೆ.29ರಂದು ಅತ್ಯಾಚಾರ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕನಕಪುರ ಮೂಲದ ನವೀನ್ ರಾವ್ ಬಂಧಿತ ಆರೋಪಿ. ಮಾನಸಿಕ ಅಸ್ವಸ್ಥ ಯುವತಿಯನ್ನು ಮನೆಯಲ್ಲೇ ಬಿಟ್ಟು ಪೋಷಕರು ಕೆಲಸಕ್ಕೆ ಹೋಗಿದ್ದರು. ಇದನ್ನು ತಿಳಿದಿದ್ದ ಆರೋಪಿ ನವೀನ್ ರಾವ್, ಯುವತಿಯ ತಂದೆ, ತಾಯಿ ಕೆಲಸಕ್ಕೆ ಹೋದ ಬಳಿಕ ಯುವಕ ನೀರು ಕೇಳುವ ನೆಪದಲ್ಲಿ ಮನೆಗೆ ಹೋಗಿದ್ದಾನೆ.
ಯುವತಿ ನೀರು ಕೊಡದಿದ್ದಾಗ ವಾಪಸ್ ಹೋಗಿದ್ದಾನೆ. ಆನಂತರ ಮಧ್ಯಾಹ್ನ ಮತ್ತೆ ಆರೋಪಿ ಮನೆಯ ಬಳಿ ಬಂದ ಯುವಕನನ್ನು ಕಂಡು ಯುವತಿ ಹೆದರಿ ಮನೆಯ ಬಾಗಿಲು ಹಾಕಿಕೊಳ್ಳಲು ಯತ್ನಿಸಿದ್ದಾಳೆ. ಮನೆಗೆ ನುಗ್ಗಿದ ಆರೋಪಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಪ್ರಾಣ ಬೆದರಿಕೆ ಒಡ್ಡಿದ್ದಾನೆ.
ಸಂತ್ರಸ್ತ ಯುವತಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದ ಹಾರೋಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.