ಹಾರೋಹಳ್ಳಿ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಎನ್‌ಸಿಇಆರ್ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶನದಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಬನವಾಸಿ ಶಾಲೆಯ ವಿದ್ಯಾರ್ಥಿನಿ ಸಿಂಚನ ಹಾಗೂ ಸಂಪನ್ಮೂಲ ನಿರ್ವಹಣೆಯಲ್ಲಿ ಕಲ್ಲನಕುಪ್ಪೆ ಶಾಲೆಯ ವಿದ್ಯಾರ್ಥಿ ಸಂತೋಷ್ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾರಿಗೆ ಮತ್ತು ಸಂಪರ್ಕ ವಿಭಾಗದಲ್ಲಿ ಕಲ್ಲನಕುಪ್ಪೆ ಶಾಲೆಯ ವಿದ್ಯಾರ್ಥಿ ಭಾಸ್ಕರ್ ಮೂರ್ತಿ ಮೂರನೇ ಸ್ಥಾನ ಪಡೆದಿದ್ದಾರೆ.
ಅಪಾಯಕಾರಿ ತ್ಯಾಜ್ಯ ವಿಂಗಡಣೆ ಸಾಧನದಿಂದ ಪೌರ ಕಾರ್ಮಿಕರಿಗೆ ಹೆಚ್ಚಿನ ಉಪಯೋಗವಾಗಲಿದೆ. ಸಾರಿಗೆ ಮತ್ತು ಸಂಪರ್ಕ ವಿಭಾಗದ ಸಾಧನ ಅಪಘಾತ ನಿಯಂತ್ರಿಸಬಲ್ಲದು. ಸಂಪನ್ಮೂಲ ನಿರ್ವಹಣೆಯ ಮತ್ತೊಂದು ಸಾಧನ ಕೃಷಿ ಮತ್ತು ಮನೆಯಲ್ಲಿ ನೀರು ಮತ್ತು ವಿದ್ಯುತ್ ಶಕ್ತಿ ಉಳಿತಾಯ ಮತ್ತು ನಿರ್ವಹಣೆಗೆ ನೆರವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.