ಹಾರೋಹಳ್ಳಿ: ಸುಮಾರು 20 ವರ್ಷಗಳಿಂದ ಕೆಲಸ ಮಾಡಿದ ಕಾರ್ಮಿಕರನ್ನು ಬೇರೆಡೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಹಾರೋಹಳ್ಳಿ ಕೈಗಾರಿಕಾ ಪ್ರದೇಶದ 1ನೇ ಹಂತದ ಇನ್ಸ್ಟ್ರಮೆಂಟ್ ರೀಸರ್ಚ್ ಅಸೋಸಿಯೇಟ್ ಕಂಪನಿಯು ತನ್ನ 16 ಕಾರ್ಮಿಕರನ್ನು ದಮನ್‌ಗೆ ವರ್ಗಾವಣೆ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿದೆ.
’20 ವರ್ಷಗಳಿಂದ ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು ಈಗ ಏಕಾಏಕಿ ದಮನ್ ರಾಜ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ 16 ಕಾರ್ಮಿಕರಿಗೆ ಇದರಿಂದ ತೀವ್ರ ತೊಂದರೆ ಆಗಿದೆ’ ಎಂದು ಅಳಲು ತೋಡಿಕೊಂಡರು.
ಹಾರೋಹಳ್ಳಿ ಶಾಖೆಯಲ್ಲಿ ಉತ್ಪಾದನೆ ಕಡಿಮೆ ಆಗಿದೆ. ಕೆಲಸದ ಅನುಕೂಲಕ್ಕೆ ದಮನ್ ರಾಜ್ಯಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಮಾನವ ಸಂಪನ್ಮೂಲ ಅಧಿಕಾರಿ ಪದ್ಮ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.