ADVERTISEMENT

‘ಓದಿನೊಂದಿಗೆ ಕ್ರೀಡಾಭ್ಯಾಸವೂ ಇರಲಿ’

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2019, 13:38 IST
Last Updated 22 ಆಗಸ್ಟ್ 2019, 13:38 IST
ಮಾಗಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಣ ಅಧಿಕಾರಿ ಸಿ.ಬಿ.ಅಶೋಕ್‌ ಮಾತನಾಡಿದರು. ಬಿಇಒ ಎಸ್‌.ಸಿದ್ದೇಶ್ವರ ಇದ್ದರು
ಮಾಗಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಣ ಅಧಿಕಾರಿ ಸಿ.ಬಿ.ಅಶೋಕ್‌ ಮಾತನಾಡಿದರು. ಬಿಇಒ ಎಸ್‌.ಸಿದ್ದೇಶ್ವರ ಇದ್ದರು   

ಮಾಗಡಿ: ಸದೃಢ ದೇಹ ಇದ್ದರೆ ಸದೃಢ ಮನಸ್ಸಿರುತ್ತದೆ ಎಂಬ ಮಾತಿನಂತೆ ವಿದ್ಯಾರ್ಥಿಗಳು ವಿದ್ಯೆ ಜತೆಗೆ ಕ್ರೀಡಾರಂಗದಲ್ಲಿ ಸಾಧನೆ ಮಾಡಲು ನಿತ್ಯ ವ್ಯಾಯಾಮ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌.ಸಿದ್ದೇಶ್ವರ ಕಿವಿಮಾತು ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಕಬಡ್ಡಿ, ಥ್ರೋಬಾಲ್‌, ಯೋಗ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಪಠ್ಯ ಪುಸ್ತಕದ ಜತೆಗೆ ದೈಹಿಕ ಕಸರತ್ತು ಮಾಡುವುದು ಇಂದಿನ ಅಗತ್ಯವಾಗಿದೆ. ಯೋಗಾಸನ ಮಾಡುವುದರಿಂದ ರೋಗ ನಿಯಂತ್ರಿಸಿ ಆರೋಗ್ಯವಂತ ಜೀವನ ನಡೆಸಬಹುದು ಎಂದರು.

ADVERTISEMENT

ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ.ಸಿ.ಬಿ.ಅಶೋಕ್‌, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಚ್‌.ಲೋಕೇಶ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರತಿನಿಧಿ ಎಂ.ಕೆಂಪೇಗೌಡ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಡಬಾಳ್‌ ಶಿವರಾಮಯ್ಯ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಾಡಬಾಳ್‌ ವೆಂಕಟೇಶ್‌ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.