ADVERTISEMENT

ಪೌರಕಾರ್ಮಿಕರಿಗೆ ನಿವೇಶನ ಕೊಡಲು ಬುದ್ಧ: ಶಾಸಕ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2025, 2:54 IST
Last Updated 4 ಅಕ್ಟೋಬರ್ 2025, 2:54 IST
ಮಾಗಡಿ ಶಿವಕುಮಾರ ಸ್ವಾಮೀಜಿ ಭವನದಲ್ಲಿ ಪುರಸಭೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಬಾಲಕೃಷ್ಣ ಪೌರಕಾರ್ಮಿಕರನ್ನು ಸನ್ಮಾನಿಸಿದರು. ಪುರಸಭೆ ಅಧ್ಯಕ್ಷೆ ರಮ್ಯಾ ನರಸಿಂಹಮೂರ್ತಿ ಇತರರು ಜತೆಯಲ್ಲಿದ್ದರು
ಮಾಗಡಿ ಶಿವಕುಮಾರ ಸ್ವಾಮೀಜಿ ಭವನದಲ್ಲಿ ಪುರಸಭೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಶಾಸಕ ಬಾಲಕೃಷ್ಣ ಪೌರಕಾರ್ಮಿಕರನ್ನು ಸನ್ಮಾನಿಸಿದರು. ಪುರಸಭೆ ಅಧ್ಯಕ್ಷೆ ರಮ್ಯಾ ನರಸಿಂಹಮೂರ್ತಿ ಇತರರು ಜತೆಯಲ್ಲಿದ್ದರು   

ಮಾಗಡಿ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ನಿವೇಶನ ನೀಡಲು ಶಾಸಕ ಎಚ್.ಸಿ.ಬಾಲಕೃಷ್ಣ ಭರವಸೆ ನೀಡಿದರು.

ಶುಕ್ರವಾರ ಪೌರಕಾರ್ಮಿಕರ ದಿನಾಚರ ಉದ್ಘಾಟಿಸಿ ಮಾತನಾಡಿದ ಅವರು, ಪುರಸಭೆ ಸದಸ್ಯರು ಗುರುತಿಸಿದ ಎರಡು ಎಕರೆ ಸರ್ಕಾರಿ ಜಾಗದಲ್ಲಿ 42 ಕಾರ್ಮಿಕರಿಗೆ ನಿವೇಶನ ಮತ್ತು ಮನೆ ನಿರ್ಮಾಣಕ್ಕೆ ಸಹಾಯ ಮಾಡುವುದಾಗಿ ಹೇಳಿದರು.

ಪಟ್ಟಣದ ಸ್ವಚ್ಛತೆಗೆ ಪೌರ ಕಾರ್ಮಿಕರ ಕೊಡುಗೆ ಗುರುತಿಸಿದ ಶಾಸಕರು, ಕಸ ವಿಲೇವಾರಿ ಮತ್ತು ಸಂಸ್ಕರಣೆಗೆ ಮೊದಲ ಆದ್ಯತೆ ನೀಡುವಂತೆ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಈ ಸಂದರ್ಭದಲ್ಲಿ ನೀರು ಸರಬರಾಜು ಸಿಬ್ಬಂದಿ ತಮ್ಮ ಕೆಲಸ ಕಾಯಂಗೊಳಿಸಬೇಕೆಂದು ಮನವಿ ಮಾಡಿದರು. 

ಪುರಸಭೆ ಅಧ್ಯಕ್ಷ ರಮ್ಯಾ ನರಸಿಂಹಮೂರ್ತಿ, ಉಪಾಧ್ಯಕ್ಷ ನಯಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ್, ಸದಸ್ಯರಾದ ರಂಗಹನುಮಯ್ಯ, ಅಶ್ವಥ್ ಅನಿಲ್ ಕುಮಾರ್, ಕಾಂತರಾಜು, ಹೇಮಲತಾ, ಭಾಗ್ಯಮ್ಮ, ಶಿವರುದ್ರಮ್ಮ, ರಾಮು, ನಾಮಿನಿ ಸದಸ್ಯರಾದ ಆನಂದ್, ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಶ್ರೀನಿವಾಸ್, ಪೌರಕಾರ್ಮಿಕ ಮಹಾಸಂಘದ ತಾಲ್ಲೂಕು ಅಧ್ಯಕ್ಷ ರವಿಕುಮಾರ್, ಗೌರವಾಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಗಿರೀಶ್, ಕಾರ್ಯದರ್ಶಿ ದೇವರಾಜು ಸೇರಿದಂತೆ ಪುರಸಭಾ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.