ಬೆಂಗಳೂರು: ‘ಬೆಂಗಳೂರು ನಗರ ಜಿಲ್ಲೆಗೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆಯನ್ನೂ ಲಾಕ್‌ಡೌನ್ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ, ರಾಮನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಭಾನುವಾರ ಸಮಾಲೋಚನೆ ನಡೆಸಿದ ಕುಮಾರಸ್ವಾಮಿ, ಲಾಕ್‌ಡೌನ್ ಮಾಡಬೇಕಾದ ಅಗತ್ಯದ ಬಗ್ಗೆ ವಿವರಿಸಿದ್ದಾರೆ.
‘ಬೆಂಗಳೂರಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನೂ ಲಾಕ್‌ಡೌನ್ ಮಾಡಲಾಗಿದೆ. ಆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಿಗಿಂತಲೂ ಬೆಂಗಳೂರಿಗೆ ಹೆಚ್ಚು ಹತ್ತಿರವಿರುವ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಂತಲೂ ಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಮನಗರ ಜಿಲ್ಲೆಯನ್ನು ಲಾಕ್‌ಡೌನ್ ಮಾಡಲೇಬೇಕಾಗಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.