ADVERTISEMENT

ಪಿಎಫ್‌ಐ ನಿಷೇಧದಿಂದ ಶಾಂತಿ ನೆಲಸುತ್ತಾ?: ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

ಚನ್ನಪಟ್ಟಣದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 2:07 IST
Last Updated 29 ಸೆಪ್ಟೆಂಬರ್ 2022, 2:07 IST
   

ಚನ್ನಪಟ್ಟಣ: ‘ಪಿಎಫ್ಐ ಸಂಘಟನೆ ಯನ್ನು ನಿಷೇಧಿಸಿದ ತಕ್ಷಣ ಸಮಾಜದಲ್ಲಿ ಶಾಂತಿ ನೆಲಸುತ್ತಾ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಾಮರಸ್ಯ, ಸೌಹಾರ್ದತೆ ಬೆಳೆಸುವ ಕೆಲಸವನ್ನು ಸರ್ಕಾರ ಮಾಡಬೇಕು. ಯಾವುದೇ ಒಂದು ಸಂಘಟನೆ ನಿಷೇಧ ಮಾಡಿದರೆ ಶಾಂತಿ ನೆಲೆಸಲ್ಲ ಎಂದು ಹೇಳಿದರು.

‘ಪಿಎಫ್‌ಐ ವಿರುದ್ಧ ದಾಖಲೆಗಳಿದ್ದರೆ ಅದನ್ನು ಜನರ ಮುಂದೆ ಇಡಬೇಕು. ಇದು ಕೇಂದ್ರ ಸರ್ಕಾರದ ಕರ್ತವ್ಯ.ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದ್ದರೆ ಕಠಿಣ ಕ್ರಮ ಆಗಬೇಕು. ಯಾವ ಯಾವ ಸಂಘಟನೆಗಳಿಂದ ದೇಶ ದ್ರೋಹದ ಕೆಲಸ ಆಗಿದೆ. ಯಾವ ರೀತಿ ಗಲಭೆ ಸೃಷ್ಟಿಗೆ ಪ್ರೋತ್ಸಾಹ ಕೊಡುತ್ತಿದ್ದಾರೆ ಎಂಬ ಮಾಹಿತಿಯನ್ನು ಜನತೆಗೆ ತಿಳಿಸಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.