ADVERTISEMENT

ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2021, 7:21 IST
Last Updated 29 ಸೆಪ್ಟೆಂಬರ್ 2021, 7:21 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 30-35 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿ ನಡೆದಿರುವ ಜೆಡಿಎಸ್ ಸಂಘಟನಾ ಕಾರ್ಯಾಗಾರದಲ್ಲಿ ಬುಧವಾರ ಮಹಿಳಾ ಕಾರ್ಯಕರ್ತರ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಾಗಲೇ 7-8 ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದೇವೆ. 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶೇ 33 ಮಹಿಳಾ ಮೀಸಲಾತಿ ವಿಧೇಯಕಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.

ಬಿಜೆಪಿ, ಕಾಂಗ್ರೆಸ್‌ಗೆ ಹೋಲಿಸಿದರೆ ನಮ್ಮಲ್ಲಿ ಮಹಿಳಾ ಘಟಕ ಹಿಂದೆ ಉಳಿದಿದೆ. ಅದನ್ನು ಸರಿಪಡಿಸಿ ಬೂತ್ ಮಟ್ಟದಿಂದ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.

ADVERTISEMENT

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ಶಾಸಕಿ ಅನಿತಾ ಕುಮಾರಸ್ವಾಮಿ ಹಾಗು ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಇದ್ದರು.

ಶಾಸಕಿ ಅನಿತಾ ಕುಮಾರಸ್ವಾಮಿ, ಲೀಲಾದೇವಿ ಆರ್. ಪ್ರಸಾದ್ ಸೇರಿದಂತೆ ಜೆಡಿಎಸ್ ಮಹಿಳಾ ಘಟಕದ ಪದಾಧಿಕಾರಿಗಳು ಇದ್ದಾರೆ.
ಜೆಡಿಎಸ್‌ ಕಾರ್ಯಾಗಾರದಲ್ಲಿ ಪಾಲ್ಗೊಂಡಿರುವ ಮಹಿಳೆಯರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.