ADVERTISEMENT

ರಾಮನಗರ ಲಾಕ್‌ಡೌನ್‌ಗೆ ಎಚ್‌ಡಿಕೆ ಸಲಹೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 16:22 IST
Last Updated 12 ಜುಲೈ 2020, 16:22 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ‘ಬೆಂಗಳೂರು ನಗರ ಜಿಲ್ಲೆಗೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆಯನ್ನೂ ಲಾಕ್‌ಡೌನ್‌ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಕಂದಾಯ ಸಚಿವ ಆರ್‌.ಅಶೋಕ, ರಾಮನಗರ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ಭಾನುವಾರ ಸಮಾಲೋಚನೆ ನಡೆಸಿದ ಕುಮಾರಸ್ವಾಮಿ, ಲಾಕ್‌ಡೌನ್‌ ಮಾಡಬೇಕಾದ ಅಗತ್ಯದ ಬಗ್ಗೆ ವಿವರಿಸಿದ್ದಾರೆ.

‘ಬೆಂಗಳೂರಿನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನೂ ಲಾಕ್‌ಡೌನ್‌ ಮಾಡಲಾಗಿದೆ. ಆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕುಗಳಿಗಿಂತಲೂ ಬೆಂಗಳೂರಿಗೆ ಹೆಚ್ಚು ಹತ್ತಿರವಿರುವ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಂತಲೂ ಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿರುವ ರಾಮನಗರ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲೇಬೇಕಾಗಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.