
ಎಚ್‌ಡಿಕೆ
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ 2028ರ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಮತ್ತೇ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಎಚ್.ಸಿ. ಜಯಮುತ್ತು ಹೇಳಿದ್ದಾರೆ.
ಕುಮಾರಸ್ವಾಮಿ ಅವರು ಈಗಾಗಲೇ ಎರಡು ಸಲ ಚನ್ನಪಟ್ಟಣದಿಂದ ಗೆದ್ದಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸುವ ಭರವಸೆ ನೀಡಿದ್ದಾರೆ ಎಂದರು.
ರಾಜ್ಯ ರಾಜಕಾರಣಕ್ಕೆ ಮರಳುವಂತೆ ಪಕ್ಷದ ಕಾರ್ಯಕರ್ತರು, ಜನರು ಒತ್ತಡ ಹೇರುತ್ತಿದ್ದಾರೆ. ಅದಕ್ಕೆ ಅವರೂ ಒಪ್ಪಿದ್ದಾರೆ. ಅವರನ್ನು ಮತ್ತೆ ಚನ್ನಪಟ್ಟಣಕ್ಕೆ ಕರೆ ತಂದು ಗೆಲ್ಲಿಸಲು ತೀರ್ಮಾನಿಸಿದ್ದೇವೆ ಎಂದು ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ಮುಂಬರುವ ಚುನಾವಣೆಗೆ ವೇಳೆಗೆ ಬಿಜೆಪಿಗೆ ಮರಳಿ ಚನ್ನಪಟ್ಟಣದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿಯನ್ನು ಅವರು ತಳ್ಳಿ ಹಾಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.