ADVERTISEMENT

ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಅಗತ್ಯ: ಎಚ್‌.ಡಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 12:05 IST
Last Updated 23 ಜನವರಿ 2021, 12:05 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ರಾಮನಗರ: ‘ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದವರು ಯಾವುದೇ ಪಕ್ಷದ ಕಾರ್ಯಕರ್ತರಿರಲಿ ಸರ್ಕಾರ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಚನ್ನಪಟ್ಟಣದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಮಂಡ್ಯದಲ್ಲಿ ಈಗ ನೂರಾರು ಅಕ್ರಮ ಗಣಿಗಳಿವೆ ಎಂದು ಅಲ್ಲಿನ ಸಚಿವರು ಹೇಳಿದ್ದಾರೆ. ಅವರು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಒಂದೂವರೆ ವರ್ಷ ಕಳೆದಿದೆ. ಅವರಿಗೆ ಮಾಹಿತಿ ಇರಲಿಲ್ಲವಾ? ಹಾಗಾದರೆ ಅವರು ಅಸಮರ್ಥರ?’ ಎಂದು ಪ್ರಶ್ನಿಸಿದರು. ‘ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಟ್ಟಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಪಾಠ ಹೇಳುತ್ತಾರೆ. ಮೊದಲು ಅದು ಕರ್ನಾಟಕದಲ್ಲಿ ಜಾರಿ ಆಗಲಿ’ ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರದಲ್ಲಿನ ಖಾತೆ ಹಂಚಿಕೆ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿ ‘ಇದು ಎಲ್ಲ ಪಕ್ಷಗಳಲ್ಲೂ ಸಾಮಾನ್ಯ. ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ. ಜನ ನಿಮ್ಮನ್ನು ತಿರಸ್ಕರಿಸುವ ಮುನ್ನ ಸರಿಪಡಿಸಿಕೊಳ್ಳಿ’ ಎಂದು ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.