ADVERTISEMENT

‘ಆರೋಗ್ಯ ಸಮಸ್ಯೆ ನಿವಾರಣೆಗೆ ಶಿಬಿರ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2019, 13:38 IST
Last Updated 13 ಅಕ್ಟೋಬರ್ 2019, 13:38 IST
ಭಾನುವಾರ ಪ್ರಗತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು
ಭಾನುವಾರ ಪ್ರಗತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು   

ರಾಮನಗರ: ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಆರೋಗ್ಯ ಶಿಬಿರ ಸಹಕಾರಿಯಾಗಲಿವೆ ಎಂದು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಉಷಾ ಕದರಮಂಡಲಗಿ ಹೇಳಿದರು.

ಇಲ್ಲಿನ ಪ್ರಗತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಭಾನುವಾರ ನಡೆದ ಉಚಿತ ಆರೋಗ್ಯ ತಪಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ, ಗುಳಿಗೆ ಮುಂತಾದ ಕಷ್ಟಗಳಿಂದ ಪಾರಾಗಬಹುದು. ಗ್ರಾಮೀಣ ಪ್ರದೇಶದಲ್ಲಿಲಯೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ADVERTISEMENT

ಆರೋಗ್ಯ ಇದ್ದರೆ ನಾವು ಸುಖ­ವಾಗಿ ಬಾಳಬಹುದು. ಕಷ್ಟಪಟ್ಟು ದುಡಿದ ಹಣವನ್ನು ಆಸ್ಪತ್ರೆಗೆ ಸುರಿ­ಯುವ ಬದಲು ಕಾಯಿಲೆ ಬರದಂತೆ ತಡೆಯು­ವುದು ಜಾಣತನವಾಗಿದೆ. ಖಾಸಗಿ ಆಸ್ಪತ್ರೆಗಳು, ಸಂಘಸಂಸ್ಥೆಗಳು ಆಯೋಜಿಸುವ ಉಚಿತ ಆರೋಗ್ಯ ತಪಸಣಾ ಶಿಬಿರಗಳನ್ನು ಜನರು ಬಳಸಿಕೊಳ್ಳಬೇಕು ಎಂದರು.

ಡಾ.ಎಂ. ಅರುಣ್, ಡಾ. ಸಂದೀಪ್, ಡಾ. ಸುನಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.