
ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಚಿಕ್ಕೇನಹಳ್ಳಿಯ ಸಂಜೀವ್ ಸಿದ್ಧಾರ್ಥ್ ಟ್ರಸ್ಟ್ ವತಿಯಿಂದ ಈಚೆಗೆ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ರಕ್ತ ಪರೀಕ್ಷೆ, ಸಾಮಾನ್ಯ ಪರೀಕ್ಷೆ, ಕಣ್ಣಿನ ಪರೀಕ್ಷೆ ಸೇರಿದಂತೆ ಹಲವು ತಪಾಸಣೆಗಳನ್ನು ನಡೆಸಲಾಯಿತು. ಡಾ. ಮನೋಜಂ, ಡಾ. ದಿಲೀಪ್, ರಕ್ತನಿದಿಯ ಗಂಗಾಧರ್ ಹಾಗೂ ಸಿಬ್ಬಂದಿಗಳು ಶಿಬಿರದಲ್ಲಿ ಕಾರ್ಯನಿರ್ವಹಿಸಿದರು.
ಶಿಬಿರಕ್ಕೆ ಚಾಲನೆ ನೀಡಿದ ಹೊಂಗನೂರು ಗ್ರಾ.ಪಂ.ಆಡಳಿತಾಧಿಕಾರಿ ಎಂ.ಶಿವಮ್ಮ, ಇತ್ತೀಚಿನ ದಿನಗಳಲ್ಲಿ ಆಧುನಿಕ ಜೀವನ ಶೈಲಿಯಲ್ಲಿ ಆಗುತ್ತಿರುವ ಬದಲಾವಣೆಯಿಂದ ದೈಹಿಕ ಹಾಗೂ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ. ಇದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದಿನನಿತ್ಯದ ಬದುಕಿನಲ್ಲಿ ಉತ್ತಮ ಆಹಾರ ಪದ್ಧತಿ, ಲಘು ವ್ಯಾಯಾಮ ಹಾಗೂ ನಡಿಗೆ ದಿನಚರಿಯ ಭಾಗವಾಗಿದ್ದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಎಚ್.ಎನ್. ರೂಪ ನಂಜೇಗೌಡ, ಸುರಕ್ಷಿತ ಆಹಾರ, ಜೀವನ ಪದ್ಧತಿ, ಹಣ್ಣು, ತರಕಾರಿ, ಮೊಟ್ಟೆ ಇತ್ಯಾದಿ ಪೌಷ್ಟಿಕಾಂಶ ಇರುವ ಆಹಾರವನ್ನು ಸೇವಿಸುವ ಮೂಲಕ ಎಲ್ಲರೂ ತಮ್ಮ ತಮ್ಮ ಆರೋಗ್ಯವನ್ನು ಸದೃಢಗೊಡಿಸಿಕೊಳ್ಳಬೇಕು ಎಂದರು.
ಸಮಾಜ ಸೇವಕ ತೀರ್ಥಪ್ರಸಾದ್, ಮುಖಂಡರಾದ ಶ್ರೀನಿವಾಸ್, ಸಿದ್ದಯ್ಯ, ರಮೇಶ್, ಕಾಳಪ್ಪ, ಗ್ರಾ.ಪಂ. ಸದಸ್ಯರಾದ ವಿನುತಾ ಮಂಜು, ಗಂಗಾಧರ ಸ್ವಾಮಿ, ರೇಖಾ ಅರಸು, ಜಬಿವುಲ್ಲಾ ಖಾನ್, ಟ್ರಸ್ಟ್ ಅಧ್ಯಕ್ಷ ಶಿವರಾಮು, ಟ್ರಸ್ಟ್ ಕಾರ್ಯದರ್ಶಿ ಎಸ್. ಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.