ADVERTISEMENT

‘ಜನತಾ ಜಲಧಾರೆ’ ಯಾತ್ರೆ ಪರಿಣಾಮದಿಂದ ರಾಜ್ಯದಲ್ಲಿ ಭಾರಿ ಮಳೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 5:48 IST
Last Updated 5 ಆಗಸ್ಟ್ 2022, 5:48 IST
ಬೆಂಗಳೂರಿನ ಜೆಪಿ ಭವನದ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಇತ್ತೀಚೆಗೆ ಜನತಾ ಜಲಧಾರೆ ಕಳಸ ಪ್ರತಿಷ್ಠಾಪನೆ ಹಾಗೂ ಗಂಗಾ ಪೂಜೆಯನ್ನು ಎಚ್ ಡಿ ಕುಮಾರಸ್ವಾಮಿ ನೆರೆವೇರಿಸಿದ್ದರು.
ಬೆಂಗಳೂರಿನ ಜೆಪಿ ಭವನದ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಇತ್ತೀಚೆಗೆ ಜನತಾ ಜಲಧಾರೆ ಕಳಸ ಪ್ರತಿಷ್ಠಾಪನೆ ಹಾಗೂ ಗಂಗಾ ಪೂಜೆಯನ್ನು ಎಚ್ ಡಿ ಕುಮಾರಸ್ವಾಮಿ ನೆರೆವೇರಿಸಿದ್ದರು.    

ಚನ್ನಪಟ್ಟಣ:ನಮ್ಮ ಪಕ್ಷದ ಪಂಚರತ್ನ ಯೋಜನೆಗಳಲ್ಲಿ ಒಂದಾದ ‘ಜನತಾ ಜಲಧಾರೆ’ ಕಾರ್ಯಕ್ರಮ ರಾಜ್ಯದಲ್ಲಿ ಯಾತ್ರೆ ಮಾಡಿದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣತಾಲ್ಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಗುರುವಾರ ವಸತಿ ಇಲಾಖೆ, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಇಲಾಖೆ, ರಾಜೀವ್‍ಗಾಂಧಿ ವಸತಿ ನಿಗಮದ ಸಹಯೋಗದಲ್ಲಿ ನಡೆದ ಎರಡನೇ ಹಂತದ ನಿವೇಶನಗಳ ಹಕ್ಕುಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಪಕ್ಷದ ಪಂಚರತ್ನ ಯೋಜನೆಗಳಲ್ಲಿ ಒಂದಾದ ‘ಜನತಾ ಜಲಧಾರೆ’ ಕಾರ್ಯಕ್ರಮ ರಾಜ್ಯದಲ್ಲಿ ಯಾತ್ರೆ ಮಾಡಿದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣ, ಪ್ರತಿಗ್ರಾಮ ಪಂಚಾಯ್ತಿಯಲ್ಲಿ ಕರ್ನಾಟಕ ಪಬ್ಲಿಕ್ ಹೈಟೆಕ್ ಸರ್ಕಾರಿ ಶಾಲೆ ನಿರ್ಮಾಣ, ಪ್ರತಿ ಮನೆಗೆ ಆರೋಗ್ಯ ಸೇವೆ, ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗಾಗಿ ಹಲವಾರು ಯೋಜನೆ, ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಭರವಸೆ ಹಾಗೂ ಹಲವಾರು ಯೋಜನೆಗಳು ಈ ಪಂಚರತ್ನ ಯೋಜನೆಯಲ್ಲಿವೆ ಎಂದು ತಿಳಿಸಿದರು.

ADVERTISEMENT

ಜನರ ಆಶೀರ್ವಾದ ಇದ್ದರೆ 2023ರಲ್ಲಿ ಮತ್ತೆ ನಾನು ಮುಖ್ಯಮಂತ್ರಿಯಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.‌

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.