ರಾಮನಗರ: ಜಿಲ್ಲೆಯಾದ್ಯಂತ ಗುರುವಾರ ಸಂಜೆ ಗುಡುಗು ಸಹಿತ ಮಳೆಯಾಯಿತು.
ನಗರದಲ್ಲಿ ಸಂಜೆ 4.30ರ ಸುಮಾರಿಗೆ ಮಳೆ ಆರಂಭಗೊಂಡಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಸಮೇತ ಸುರಿಯಿತು. ಇದರಿಂದಾಗಿ ವಾತಾವರಣ ತಂಪಾಯಿತು. ನಂತರದಲ್ಲೂ ಮಳೆ ಹನಿಯುತ್ತ ಇತ್ತು.
ಮಾಗಡಿ, ಚನ್ನಪಟ್ಟಣ, ಕನಕಪುರ ಹಾಗೂ ಬಿಡದಿಯಲ್ಲೂ ಅಲ್ಲಲ್ಲಿ ಮಳೆಯಾಗಿದೆ. ಬಿರುಗಾಳಿ ಹೆಚ್ಚಾಗಿರುವ ಕಾರಣಕ್ಕೆ ಮಾವಿನ ಬೆಳೆಗೆ ಹಾನಿಯಾಗಿದ್ದು, ಕಾಯಿಗಳು ನೆಲ ಕಚ್ಚಿವೆ. ಬುಧವಾರ ರಾತ್ರಿಯೂ ರಾಮನಗರದಲ್ಲಿ ಉತ್ತಮ ಮಳೆ ಸುರಿದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.