ರಾಮನಗರ: ಜಿಲ್ಲೆಯ ವಿವಿಧೆಡೆ ಕಳೆದ ಎರಡು ದಿನದಿಂದ ಉತ್ತಮ ಮಳೆ ಸುರಿದಿದೆ.
ರಾಮನಗರದಲ್ಲಿ ಶುಕ್ರವಾರ ರಾತ್ರಿ ಗುಡುಗು–ಸಿಡಿಲಿನೊಂದಿಗೆ ಕೆಲಕಾಲ ಉತ್ತಮ ಮಳೆ ಸುರಿಯಿತು. ಶನಿವಾರ ದಿನವಿಡೀ ಮೋಡ ಕವಿದ ವಾತಾವರಣ ಇದ್ದು, ಆಗಾಗ್ಗೆ ಸಾಧಾರಣ ಮಳೆ ಆಯಿತು. ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ರಾಗಿ ಬೆಳೆಗೆ ಹಾನಿಯಾಗಿದ್ದು, ಸದ್ಯ ಸುರಿಯುತ್ತಿರುವ ವರ್ಷಧಾರೆಯೂ ಸಂಜೀವಿನಿಯಂತೆ ಬಂದಿದೆ. ಶುಕ್ರವಾರ ರಾತ್ರಿ ಜಿಲ್ಲೆಯಲ್ಲಿ ಸರಾಸರಿ 16 ಮಿ.ಮೀ ಮಳೆಯಾಗಿದೆ.
ಅಕ್ಟೋಬರ್‌ನಲ್ಲಿ ಈವರೆಗೆ 60 ಮಿ.ಮೀ. ವಾಡಿಕೆ ಮಳೆಗೆ ಪ್ರತಿಯಾಗಿ 68 ಮಿ.ಮೀ.ನಷ್ಟು ಮಳೆ ಸುರಿದಿದ್ದು, ವಾಡಿಕೆಗಿಂತ ಶೇ 13ರಷ್ಟು ಹೆಚ್ಚು ವರ್ಷಧಾರೆ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.