ADVERTISEMENT

ರಾಮನಗರದಲ್ಲಿ ಮಳೆಯ ಅಬ್ಬರ: ಅರ್ಕಾವತಿ, ವೃಷಭಾವತಿ, ಕಣ್ವ ನದಿಗಳಲ್ಲಿ ಪ್ರವಾಹ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 5:12 IST
Last Updated 2 ಆಗಸ್ಟ್ 2022, 5:12 IST
   

ರಾಮನಗರ: ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಮಳೆ ಅಬ್ಬರಿಸಿದ್ದು, ಅರ್ಕಾವತಿ, ವೃಷಭಾವತಿ ಹಾಗೂ ಕಣ್ವ ನದಿಗಳಲ್ಲಿ ಪ್ರವಾಹ ಉಂಟಾಗಿದೆ‌.

ಮಂಚನಬೆಲೆ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿದ್ದು, ನೀರಿನ ಹರಿವಿನಿಂದಾಗಿ ನದಿ ಸುತ್ತಲಿನ ಜಮೀನುಗಳು ಮುಳುಗಡೆ ಆಗಿವೆ. ಕಣ್ವ ನದಿ ಸುತ್ತಲಿನ ಗುಡ್ಡಗಳು ಕುಸಿಯುತ್ತಿವೆ.

ಬಿಡದಿಯ ನಲ್ಲಿಗುಡ್ಡೆ ಸೇರಿದಂತೆ ಬಹುತೇಕ ಕೆರೆಗಳು ಭರ್ತಿ ಆಗಿದ್ದು, ಕೋಡಿ ನೀರು ರಸ್ತೆಗೆ ಹರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.