ADVERTISEMENT

‘ಸೌಂದರ್ಯವರ್ಧನೆ ಕೋರ್ಸ್‌ಗೆ ಹೆಚ್ಚಿನ ಬೇಡಿಕೆ’

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2019, 13:33 IST
Last Updated 15 ಫೆಬ್ರುವರಿ 2019, 13:33 IST
ಹಾರೋಹಳ್ಳಿ ಕೆನರಾ ಬ್ಯಾಂಕ್‌ ಗ್ರಾಮೀಣ ಮಹಿಳಾ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಪ್ರಮಾಣಪತ್ರ ವಿತರಿಸಲಾಯಿತು
ಹಾರೋಹಳ್ಳಿ ಕೆನರಾ ಬ್ಯಾಂಕ್‌ ಗ್ರಾಮೀಣ ಮಹಿಳಾ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಪ್ರಮಾಣಪತ್ರ ವಿತರಿಸಲಾಯಿತು   

ಹಾರೋಹಳ್ಳಿ (ಕನಕಪುರ): ಇತ್ತೀಚಿನ ದಿನಗಳಲ್ಲಿ ಸೌಂದರ್ಯ ವರ್ಧಕದ ಕುರಿತುಹೆಚ್ಚಿನ ಆಸಕ್ತಿಯನ್ನು ತೋರಲಾಗುತ್ತಿದೆ. ಬ್ಯೂಟಿ ಕೋರ್ಸ್‌ಗಳಿಗೆ ಹೆಚ್ಚಿನ ಬೇಡಿಕೆಯಿದೆ ಎಂದು ಹಾರೋಹಳ್ಳಿ ಕೆನರಾ ಬ್ಯಾಂಕ್‌ ಗ್ರಾಮೀಣ ಮಹಿಳಾ ಸ್ವ–ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕಿ ಸುಮ.ಎನ್‌. ಗಾಂವಕರ್‌ ಹೇಳಿದರು.

ಹಾರೋಹಳ್ಳಿ ಕೆನರಾ ಬ್ಯಾಂಕ್‌ ಗ್ರಾಮೀಣ ಮಹಿಳೆಯರ ಸ್ವ–ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೌಂದರ್ಯ ವರ್ಧನಾ ತರಬೇತಿ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರವನ್ನು ವಿತರಣೆ ಮಾಡಿ ಅವರು ಮಾತನಾಡಿದರು.

‘ನಮ್ಮಲ್ಲಿ ಉಚಿತವಾಗಿ ತರಬೇತಿಯನ್ನು ಕೊಡಲಾಗುತ್ತಿದೆ. ಇದನ್ನು ಚೆನ್ನಾಗಿ ಕಲಿತು ಮುಂದೆ ನೀವುಗಳೇ ಸ್ವಂತ ಬ್ಯೂಟಿ ಪಾರ್ಲರ್‌ಗಳನ್ನು ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಿ’ ಎಂದು ಶುಭ ಕೋರಿದರು.

ADVERTISEMENT

ಬಿ.ಎಸ್‌.ಪಿ. ರಾಜ್ಯ ಕಾರ್ಯದರ್ಶಿ ಅನ್ನದಾನಪ್ಪ, ಧಮ್ಮಭೂಮಿ ಚಾರಿಟಬಲ್‌ ಟ್ರಸ್ಟ್‌ ಕಾರ್ಯದರ್ಶಿ ಕೃಷ್ಣಮೂರ್ತಿ, ನಾಯ್ಕನಹಳ್ಳಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಿವಾನಂದ ಪಾಲ್ಗೊಂಡಿದ್ದರು. ಸಂಸ್ಥೆಯ ದೇವಿಂದ್ರಪ್ಪ, ನೇತ್ರಾವತಿ, ಸಂಧ್ಯಾರಾಣಿ, ಗವಿರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.