
ಪ್ರಜಾವಾಣಿ ವಾರ್ತೆ
ಮಾಗಡಿ: ರಾಜ್ಯ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಬೇರೆಯವರಿಗೆ ಸಂದೇಶ ಕಳುಹಿಸಿ ಹೆಸರು ಕೆಡಿಸುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಜಾಲತಾಣಗಳಲ್ಲಿ ರೇವಣ್ಣ ನಕಲಿ ಖಾತೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಖಾತೆ ಹ್ಯಾಕ್ ಆಗಿದೆ. ವಿಚಿತ್ರ ಸಂದೇಶ ಹಾಗೂ ಹಣ ಕೇಳುವ ವಿನಂತಿ ಹೋಗುತ್ತಿದೆ. ಯಾರು ಸಂದೇಶಕ್ಕೆ ಪ್ರತಿಕ್ರಿಯಿಸಬೇಡಿ ಅಥವಾ ನಂಬಿ ಮೋಸ ಹೋಗಬೇಡಿ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.