ADVERTISEMENT

ಚನ್ನಪಟ್ಟಣ: ಗೃಹರಕ್ಷಕ ಸಿಬ್ಬಂದಿ ಜಿಲ್ಲಾಮಟ್ಟದ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 2:25 IST
Last Updated 12 ನವೆಂಬರ್ 2025, 2:25 IST
ಚನ್ನಪಟ್ಟಣದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಗೃಹರಕ್ಷಕ ಸಿಬ್ಬಂದಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೆ.ಆರ್.ರಘು ಚಾಲನೆ ನೀಡಿದರು. ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಎಲ್.ನಿರಂಜನ್ ಇತರರು ಹಾಜರಿದ್ದರು
ಚನ್ನಪಟ್ಟಣದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಗೃಹರಕ್ಷಕ ಸಿಬ್ಬಂದಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೆ.ಆರ್.ರಘು ಚಾಲನೆ ನೀಡಿದರು. ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಎಲ್.ನಿರಂಜನ್ ಇತರರು ಹಾಜರಿದ್ದರು   

ಚನ್ನಪಟ್ಟಣ: ಗೃಹ ರಕ್ಷಕ ದಳದ ಸಿಬ್ಬಂದಿ ಪ್ರತಿದಿನ ವ್ಯಾಯಾಮ ಮಾಡುವ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೇಹ ಹಾಗೂ ಮನಸ್ಸಿನ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೆ.ಆರ್.ರಘು ಕಿವಿಮಾತು ಹೇಳಿದರು.

ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ, ರಾಮನಗರ ಗೃಹರಕ್ಷಕ ದಳದ ವತಿಯಿಂದ ಸೋಮವಾರ ಏರ್ಪಡಿಸಿದ್ದ ಗೃಹರಕ್ಷಕ ಸಿಬ್ಬಂದಿಗೆ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಾನಸಿಕ ಹಾಗೂ ದೈಹಿಕ ಸಮತೋಲನೆಗೆ ಕ್ರೀಡೆ ಹೆಚ್ಚು ಸಹಕಾರಿಯಾಗಿದೆ. ಪ್ರತಿದಿನ ಸಮಾಜದ ಆಸ್ತಿ, ಪಾಸ್ತಿ, ಪ್ರಾಣ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಗೃಹರಕ್ಷಕರ ಸೇವೆಯನ್ನು ಶ್ಲಾಘನೀಯ. ಅವರಿಗಾಗಿ ಕ್ರೀಡಾಕೂಟವನ್ನು ಆಯೋಜಿಸಿರುವುದು ಸ್ವಾಗತಾರ್ಹ. ಸದಾ ಒತ್ತಡದಲ್ಲಿರುವ ಗೃಹರಕ್ಷಕರು ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಳ್ಳಬೇಕು ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ದಕ್ಷಿಣ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಎಲ್.ನಿರಂಜನ್ ಮಾತನಾಡಿ, ಅತಿವೃಷ್ಟಿ, ಅನಾವೃಷ್ಟಿ, ತುರ್ತು ಸಂದರ್ಭಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಗೃಹರಕ್ಷಕರಿಗೆ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗೃಹರಕ್ಷಕರಿಗೆ ಕ್ರೀಡಾಕೂಟ ಆಯೋಜನೆ ಮಾಡಿ, ಪ್ರೋತ್ಸಾಹಿಸುತ್ತಿರುವ ಇಲಾಖೆ ಕಾರ್ಯ ಪ್ರಶಂಸನೀಯ ಎಂದರು.

ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಭೋದಕ ಎಂ.ಆರ್.ಚಂದನ್, ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಅಧೀಕ್ಷಕ ಆರ್.ಕೆ.ರವಿ, ಜಿಲ್ಲಾ ಗೃಹರಕ್ಷಕ ದಳದ ಕಚೇರಿ ಸಿಬ್ಬಂದಿ ಪಿ.ಸ್ವಪ್ನ, ಅಧಿಕಾರಿ ವರ್ಗ, ಸಿಬ್ಬಂದಿ ಹಾಜರಿದ್ದರು. ನಂತರ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.