ADVERTISEMENT

ಹೊನ್ನಿಗನಹಳ್ಳಿ: ಗ್ರಾಮ ಪಂಚಾಯತಿ ಸದಸ್ಯನ ವಿರುದ್ಧ ಏಕಾಂಗಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 2:33 IST
Last Updated 11 ಡಿಸೆಂಬರ್ 2025, 2:33 IST
<div class="paragraphs"><p>ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಸಾಮಾಜಿಕ ಕಾರ್ಯಕರ್ತ&nbsp;</p></div>

ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಸಾಮಾಜಿಕ ಕಾರ್ಯಕರ್ತ 

   

ಕನಕಪುರ: ಸಾತನೂರು ಹೋಬಳಿ ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಭ್ರಷ್ಟಾಚಾರದ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರಿಹರ ಸ್ವಾಮಿ ಎಂಬುವರು ಮಂಗಳವಾರ ಪಂಚಾಯಿತಿ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

‘ಹೊನ್ನಿಗನಹಳ್ಳಿ ಗ್ರಾಮ ಪಂಚಾಯಿತಿ ಹರಿಹರ ಸದಸ್ಯ ಎಚ್.ಕೆ.ಸೋಮಶೇಖರ್ ನರೇಗಾ ಯೋಜನೆಯಲ್ಲಿ ಅಕ್ರಮ ಎಸೆಗಿದ್ದಾರೆ. ಚುನಾವಣಾ ಆಯೋಗಕ್ಕೆ ಸುಳ್ಳು ಅಫಿಡೆವಿಟ್ ಸಲ್ಲಿಸಿ ವಂಚನೆ ಮಾಡಿದ್ದಾರೆ’ ಎಂದು ದೂರಿದರು. 

ಆರೋಪಗಳ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳುವಂತೆ ಪಿಡಿಒ ಮಹೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರಗತಿಪರ ಸಂಘಟನೆಗಳ ಮುಖಂಡರು ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.