ADVERTISEMENT

ರಾಮನಗರಕ್ಕೆ ನಾನೇ ಅಭ್ಯರ್ಥಿ: ಅನಿತಾ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2018, 18:43 IST
Last Updated 7 ಅಕ್ಟೋಬರ್ 2018, 18:43 IST
ಅನಿತಾ ಕುಮಾರಸ್ವಾಮಿ
ಅನಿತಾ ಕುಮಾರಸ್ವಾಮಿ   

ರಾಮನಗರ: ‘ನ.3ರಂದು ನಡೆಯಲಿರುವ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ ಆಗಲಿದ್ದೇನೆ’ ಎಂದು ಪಕ್ಷದ ನಾಯಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ತಾಲ್ಲೂಕಿನ ಮೊಟ್ಟೆದೊಡ್ಡಿ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿದ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ‘ಕಾರ್ಯಕರ್ತರ ಒಮ್ಮತದ ಅಭಿಪ್ರಾಯದ ಮೇರೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಇನ್ನೆರಡು ದಿನದಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಘೋಷಣೆ ಮಾಡಲಿದ್ದಾರೆ. ಬೇರೆ ಪಕ್ಷದಿಂದ ಯಾರೇ ಸ್ಪರ್ಧಿಸಿದರೂ ಚಿಂತೆಯಿಲ್ಲ. ಗೆಲುವು ನಮ್ಮದೇ ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT