ADVERTISEMENT

ನನ್ನ ಹೇಳಿಕೆಗೆ ಈಗಲೂ ಬದ್ಧ: ಇಕ್ಬಾಲ್ ಹುಸೇನ್

​ಪ್ರಜಾವಾಣಿ ವಾರ್ತೆ
Published 2 ಜುಲೈ 2025, 15:44 IST
Last Updated 2 ಜುಲೈ 2025, 15:44 IST
<div class="paragraphs"><p>ಎಚ್‌.ಎ. ಇಕ್ಬಾಲ್ ಹುಸೇನ್, ಶಾಸಕ</p></div>

ಎಚ್‌.ಎ. ಇಕ್ಬಾಲ್ ಹುಸೇನ್, ಶಾಸಕ

   

ರಾಮನಗರ: ‘ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಪಕ್ಷದ ಅಧ್ಯಕ್ಷರಾಗಿರುವ ನಮ್ಮ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರವಿದೆ. ನನ್ನ ಮನದಲ್ಲಿ ಏನಿತ್ತು ಎಂಬುದನ್ನು ಹೇಳಿದ್ದೇನೆ. ಅದಕ್ಕಾಗಿ ನೀಡಿರುವ ನೋಟಿಸ್‌ಗೆ 7 ದಿನದೊಳಗೆ ಪ್ರತಿಕ್ರಿಯಿಸುವೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.

ಡಿಕೆಶಿ ಮುಖ್ಯಮಂತ್ರಿಯಾಗಬೇಕು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ತಮಗೆ ಜಾರಿಯಾಗಿರುವ ನೋಟಿಸ್ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಾಕಷ್ಟು ಜನ ಶಾಸಕರು ಕರೆ ಮಾಡಿ ನಿಮಗೆ ಯಾಕೆ ನೋಟಿಸ್ ಕೊಟ್ಟಿದ್ದಾರೆ ಎಂದು ಕೇಳುತ್ತಿದ್ದಾರೆ’ ಎಂದರು.

ADVERTISEMENT

‘ರಾಜ್ಯದಲ್ಲಿ ದೇವರಾಜು ಅರಸು ಬಳಿಕ ಸಿದ್ದರಾಮಯ್ಯ ಅವರು ಮಾಡಿರುವ ಕೆಲಸವನ್ನು ಮಾಡಲು ಬೇರಾರಿಂದಲೂ ಮಾಡಲು ಸಾಧ್ಯವಿಲ್ಲ. ಅವರಷ್ಟು ಜನಪ್ರಿಯ ಯೋಜನೆಗಳನ್ನು ಯಾರೂ ಕೊಟ್ಟಿಲ್ಲ. ನಾನು ಸಿದ್ದರಾಮಯ್ಯ ಅವರಿಗೆ ಹತ್ತಿರವಾಗಿದ್ದೇನೆ. ಆದರೆ, ಬೇರೆಯವರಿಗೂ ಒಂದು ಅವಕಾಶ ಸಿಗಲಿ ಎಂದಷ್ಟೆ ನಾನು ಹೇಳಿದ್ದೇನೆ. ಶಿವಕುಮಾರ್ ಅವರು ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮ ಹಾಕಿ ಹೋರಾಡಿದ್ದಾರೆ. ಅವರಿಗೆ ಅವಕಾಶ ಸಿಕ್ಕರೆ ಪಕ್ಷ ಬೆಳೆಯುತ್ತದೆ ಎಂಬುದು ನನ್ನ ಅಭಿಲಾಷೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.