ಚನ್ನಪಟ್ಟಣ: ತಾಲ್ಲೂಕಿನ ಇಗ್ಗಲೂರು ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿಎಂಕೆ ಕುಮಾರ್, ಉಪಾಧ್ಯಕ್ಷರಾಗಿ ಸರೋಜಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಸರೋಜಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದ ಕಾರಣ ಚುನಾವಣಾಧಿಕಾರಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಈ ವೇಳೆ ಸಂಘದ ನಿರ್ದೇಶಕರಾದ ಮೋಹನ್ ಚಂದ್ರಬಾಬು, ಇ.ತಿ.ಶ್ರೀನಿವಾಸ್, ಮರಿಸ್ವಾಮಿ, ನಿರಂಜನ್ ಸ್ವಾಮಿ, ಪ್ರಸನ್ನಕುಮಾರ್, ಸಿದ್ದಪ್ಪ, ನಂಜಮ್ಮ, ಜಯಮ್ಮ, ರಂಗೇಗೌಡ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.