ADVERTISEMENT

ಮಾಗಡಿ: ಈಡಿಗರ ಸಮುದಾಯ ಭವನ ಉದ್ಘಾಟನೆ ನಾಳೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 2:41 IST
Last Updated 8 ಜೂನ್ 2022, 2:41 IST
ಮಾಗಡಿ ತಾಲ್ಲೂಕಿನ ಬ್ಯಾಲಕೆರೆಯ ಶಿವಕುಮಾರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಬೆಂಗಳೂರಿನ ಎಂಇಎಸ್‌ ಪದವಿ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟರು
ಮಾಗಡಿ ತಾಲ್ಲೂಕಿನ ಬ್ಯಾಲಕೆರೆಯ ಶಿವಕುಮಾರ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಬೆಂಗಳೂರಿನ ಎಂಇಎಸ್‌ ಪದವಿ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟರು   

ಮಾಗಡಿ: ಪಟ್ಟಣದ ತಿರುಮಲೆ ತೇರು ಮಂಟಪದ ಬಳಿ ತಾಲ್ಲೂಕು ಆರ್ಯ ಈಡಿಗರ ಸಂಘದಿಂದ ನಿರ್ಮಿಸಿರುವ ಸಮುದಾಯ ಭವನದ ಉದ್ಘಾಟನಾ ಸಮಾರಂಭವು ಜೂನ್‌ 8 ಮತ್ತು 9ರಂದು ನಡೆಯಲಿದೆ ಎಂದು ತಾಲ್ಲೂಕು ಈಡಿಗರ ಸಂಘದ ಅಧ್ಯಕ್ಷ ಎಂ.ಜಿ. ಗೋಪಾಲ್‌ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜೂನ್‌ 8ರಂದು ಸ್ವಸ್ತಿವಾಚನ, ಅಮಾಜ್ಞೆ ದೀಪಾರಾಧನೆ, ಕಳಸ ಸ್ಥಾಪನೆ, ಅಗ್ನಿ ಪ್ರತಿಷ್ಠಾಪನೆ, ಗಣಪತಿ ಹೋಮ ನಡೆಯಲಿದೆ ಎಂದರು.
ಜೂನ್‌ 9ರಂದು ಬೆಳಿಗ್ಗೆ ಗೋಪೂಜೆ, ಸಮುದಾಯ ಭವನ ಪ್ರವೇಶ, ವೇದಪಾರಾಯಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠಾಧೀಶ ವಿಖ್ಯಾತಾನಂದ ಸ್ವಾಮೀಜಿ, ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ರಾಮಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌, ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸಮುದಾಯ ಭವನ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ. ತಿಮ್ಮೇಗೌಡ ಅಧ್ಯಕ್ಷತೆವಹಿಸಲಿದ್ದಾರೆ. ಶಾಸಕ ಎ. ಮಂಜುನಾಥ್‌, ಮಾಜಿ ಸಚಿವ ಎಚ್‌.ಎಂ. ರೇವಣ್ಣ, ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌, ಸಂಸದ ಡಿ.ಕೆ. ಸುರೇಶ್‌, ಶಾಸಕರಾದ ಕುಮಾರ್‌ ಬಂಗಾರಪ್ಪ, ಹರತಾಳು ಹಾಲಪ್ಪ, ಹರಿಕೃಷ್ಣ ಬಂಟ್ವಾಳ್‌, ಜೆಪಿಎನ್‌ ಪ್ರತಿಷ್ಠಾನದ ಅಧ್ಯಕ್ಷ ಜೆ.ಪಿ. ಸುಧಾಕರ್‌, ಮೈಸೂರು ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಎಂ.ಕೆ. ಪೋತರಾಜು, ಉದ್ಯಮಿ ರವಿದಾಸಪ್ಪ, ಮಂಗಳೂರಿನ ಪಣಂಬೂರು ಎಸಿಪಿ ಮಹೇಶ್‌ ಕುಮಾರ್‌ ಹಾಗೂ ಈಡಿಗರ ಸಂಘದ ಮುಖಂಡರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಆರ್ಯ ಈಡಿಗರ ಸಂಘದ ಕಾರ್ಯದರ್ಶಿ ಚಂದ್ರಶೇಖರ್‌, ಮೋಹನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.