ADVERTISEMENT

‘ದೇಶದ ಅಭಿವೃದ್ಧಿಯ ವೇಗ ಹೆಚ್ಚಳ’

ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ; ಸಂಭ್ರಮಾಚರಣೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 4:42 IST
Last Updated 11 ಜೂನ್ 2024, 4:42 IST
ಕನಕಪುರ ಚನ್ನಬಸಪ್ಪ ವೃತ್ತದಲ್ಲಿ ಬಿಜೆಪಿ ಜೆಡಿಎಸ್‌ ಮುಖಂಡರು ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು
ಕನಕಪುರ ಚನ್ನಬಸಪ್ಪ ವೃತ್ತದಲ್ಲಿ ಬಿಜೆಪಿ ಜೆಡಿಎಸ್‌ ಮುಖಂಡರು ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡಿದರು   

ಕನಕಪುರ: ‘ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ನಗರದ ಚನ್ನಬಸಪ್ಪ ವೃತ್ತದಲ್ಲಿ ಸಿಹಿ ವಿತರಣೆ ಮಾಡಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಪಿ.ಕುಮಾರ್ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು ಐತಿಹಾಸಿಕ ದಿನವಾಗಿದೆ. ಕಳೆದೆರಡು ಅವಧಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದು, ಮೂರನೇ ಅವಧಿಯಲ್ಲಿ ಜಗತ್ತಿನ ಎದುರು ‘ವಿಶ್ವಗುರು’ ಮಾಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮೋದಿ ನಾಯಕತ್ವವನ್ನು ಮೆಚ್ಚಿ ಸತತ ಮೂರನೇ ಬಾರಿಗೆ ಆಡಳಿತ ನಡೆಸಲು ಆಶೀರ್ವಾದ ಮಾಡಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕೇಂದ್ರದಲ್ಲಿ ಹೊಸ ಅಧ್ಯಾಯ ಬರೆದಿದೆ. ಆ ಮೂಲಕ ದೇಶದ ಪ್ರಗತಿಯ ವೇಗ ಹೆಚ್ಚಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ನಗರ ಘಟಕದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ‘ದೇಶದ ಅಧಿಕಾರದ ಚುಕ್ಕಾಣಿಯನ್ನು ಮೂರನೇ ಬಾರಿಗೆ ಹಿಡಿಯುತ್ತಿರುವ ನರೇಂದ್ರ ಮೋದಿ ಆಡಳಿತ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಾಗಲಿದೆ. ದೇಶದ ಕೋಟ್ಯಂತರ ಜನರ ಹಾರೈಕೆ ಹಾಗೂ ಆಶಯದಿಂದ ಎನ್‌ಡಿಎ ಮೈತ್ರಿ ಕೂಟದ ಮೋದಿಯವರು ದೇಶದ ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವುದರ ಜೊತೆಗೆ ಸಮಗ್ರ ಅಭಿವೃದ್ಧಿಗಾಗಿ ದುಡಿಯಲಿದ್ದಾರೆ’ ಆಶಾಭಾವ ವ್ಯಕ್ತಪಡಿಸಿದರು.

ಜಿಲ್ಲಾ ಉಪಾಧ್ಯಕ್ಷ ಕೋಟೆ ರಾಜೇಶ್, ನಗರ ಘಟಕದ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಮುಖಂಡರಾದ ಕೋಟೆ ಕಿಟ್ಟಿ, ಆಟೊ ಕುಮಾರ್, ಶಿವಮುತ್ತು, ಡಿ.ಶ್ರೀನಿವಾಸ್, ಶಿವಲಿಂಗಯ್ಯ, ಆನಂದ್ ಪೈ, ನಗರಸಭಾ ಸದಸ್ಯೆ ಮಾಲತಿ ಆನಂದ್, ಜೆಡಿಎಸ್ ಪಕ್ಷದ ನಗರಸಭಾ ಸದಸ್ಯ ಜಯರಾಮ್, ಬಿಜೆಪಿ ಯುವ ಮೋರ್ಚಾದ ಶೇಖರ್, ಭರತ್, ಮಹಿಳಾ ಘಟಕದ ಪವಿತ್ರಾ, ವರಲಕ್ಷ್ಮೀ, ತಾಸೀನಾ ಖಾನ್, ಉಭಯ ಪಕ್ಷಗಳ ಕಾರ್ಯಕರ್ತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.