ADVERTISEMENT

ಶಾಲಾ ಮಕ್ಕಳ ಜತೆ ಸ್ವಾತಂತ್ರ್ಯ ದಿನ ಆಚರಿಸಿದ ಜಿಕೆವಿಕೆ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 14:12 IST
Last Updated 16 ಆಗಸ್ಟ್ 2024, 14:12 IST
ಮಾಗಡಿ ತಾಲ್ಲೂಕಿನ ತಟವಾಳು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೃಷಿ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು 
ಮಾಗಡಿ ತಾಲ್ಲೂಕಿನ ತಟವಾಳು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೃಷಿ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು    

ಮಾಗಡಿ: ತಾಲ್ಲೂಕಿನ ತಟವಾಳು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಾಲಾ ಮಕ್ಕಳ ಜೊತೆ ಸೇರಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು 78ನೇ ಸ್ವಾತಂತ್ರ್ಯ ದಿನ ಆಚರಿಸಿದರು. 

ಗ್ರಾಮೀಣ ಕೃಷಿ ಕಾರ್ಯ ಅನುಭವ ಶಿಬಿರಕ್ಕೆ ಬಂದಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಬಿಎಸ್‌ಸಿ, ಎಜಿ (ಜಿಕೆವಿಕೆ) ಅಂತಿಮ ವರ್ಷದ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆ ಮತ್ತು ಮನೋರಂಜನೆ ಆಟಗಳನ್ನು ಆಯೋಜಿಸಿದರು. ಅಲ್ಲದೆ, ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. 

ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ಜಿಕೆವಿಕೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಮಹನೀಯರ ತ್ಯಾಗ, ಬಲಿದಾನಗಳ ಬಗ್ಗೆ ಶಾಲಾ ಮಕ್ಕಳಿಗೆ ತಿಳಿಹೇಳಿದರು. 

ADVERTISEMENT

ಮೂರು ತಿಂಗಳು ತರಬೇತಿ: ಕೃಷಿ ಬಿಎಸ್‌ಸಿ, ಕೃಷಿ ವ್ಯವಹಾರ ನಿರ್ವಹಣೆ ಹಾಗೂ ಬಿ ಟೆಕ್ ಕೃಷಿ ಎಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳು ತಾಲ್ಲೂಕಿನ ತಟವಾಳು ಗ್ರಾಮದಲ್ಲಿ ಮೂರು ತಿಂಗಳು ತರಬೇತಿ ಪಡೆಯಲಿದ್ದಾರೆ. ಅಲ್ಲದೆ, ಕೃಷಿಯಲ್ಲಿ ವಿವಿಧ ರೀತಿಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಂತೆ ರೈತರಲ್ಲಿ ಜಾಗೃತಿ ಮೂಡಿಸಲಿದ್ದಾರೆ. 

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಎನ್. ಮಂಜುನಾಥ್ ಮಾತನಾಡಿ, ಕೃಷಿಯಲ್ಲಿ ಸಾಕಷ್ಟು ಬದಲಾವಣೆ ಕಾಣುತ್ತಿದ್ದು, ಅತ್ಯಾಧುನಿಕ ಯಂತ್ರಗಳ ಮೂಲಕ ಕೃಷಿ ಈಗ ಸರಳವಾಗಿದೆ ಎಂದರು.

ಹಾಲಿನ ಡೇರಿ ಅಧ್ಯಕ್ಷ ಟಿ.ಶೇಖರ್, ಉಪಾಧ್ಯಕ್ಷ ಮಲ್ಲಣ್ಣ, ಮಾಜಿ ಅಧ್ಯಕ್ಷ ಕೆ. ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಉಮಾದೇವಿ, ಉಪಾಧ್ಯಕ್ಷ ವಿಜಯಲಕ್ಷ್ಮಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶಿವಕುಮಾರ್, ನಿರ್ದೇಶಕ ವೀರಣ್ಣ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.