ADVERTISEMENT

ಜ.11ಕ್ಕೆ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 14:07 IST
Last Updated 10 ಜನವರಿ 2019, 14:07 IST
ಇಂದಿರಾ ಕ್ಯಾಂಟೀನ್‌ .
ಇಂದಿರಾ ಕ್ಯಾಂಟೀನ್‌ .   

ಮಾಗಡಿ:₹1ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್‌ ಉದ್ಘಾಟನಾ ಸಮಾರಂಭ ಜ.11ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್‌ ಉದ್ಘಾಟಿಸಲಿದ್ದಾರೆ.

ಶಾಸಕ ಎ.ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಡಿ.ಕೆ.ಸುರೇಸ್‌, ವಿಧಾನ ಪರಿಷತ್‌ ಸದಸ್ಯರಾದ ಎಚ್‌.ಎಂ.ರೇವಣ್ಣ, ಎಸ್‌.ರವಿ, ಪುರಸಭೆ ಅಧ್ಯಕ್ಷ ಎಚ್‌.ಆರ್‌.ಮಂಜುನಾಥ್‌, ಪೌರಾಡಳಿತ ನಿರ್ದೇಶಕ ಟಿ.ಎಸ್‌.ಶೇಖರಪ್ಪ, ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ, ಪುರಸಭೆ ಉಪಾಧ್ಯಕ್ಷ ಎಂ.ನಾಗೇಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷ ರಿಯಾಜ್‌, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಮಾಯಣ್ಣಗೌಡ ಹಾಗೂ ಪುರಸಭೆ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಮುಖ್ಯಾಧಿಕಾರಿ ಎಚ್.ಎನ್‌.ನಟರಾಜ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT