
ಕನಕಪುರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ-2025 ಇಂದಿರಾ ಪ್ರಿಯದರ್ಶಿನಿ ಪರಿಸರ ಜಿಲ್ಲಾ ಪ್ರಶಸ್ತಿಯು ಕನಕಪುರ ತಾಲ್ಲೂಕಿನ ಪರಿಸರ ಪ್ರೇಮಿ ಮರಸಪ್ಪ ರವಿ ಅವರಿಗೆ ಲಭಿಸಿದೆ.
ಬೆಂಗಳೂರು ಅರಮನೆ ಮೈದಾನದಲ್ಲಿ ನವೆಂಬರ್ 19ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮರಸಪ್ಪ ರವಿ ಅವರಿಗೆ ಜಿಲ್ಲಾ ಪ್ರಶಸ್ತಿ, ನಗದು ನೀಡಿ ಗೌರವಿಸಲಾಯಿತು.
ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ನರೇಂದ್ರಸ್ವಾಮಿ, ಸಚಿವರಾದ ಈಶ್ವರ್ ಖಂಡ್ರೆ, ದಿನೇಶ್ ಗುಂಡೂರಾವ್, ಎನ್.ಚಲುವರಾಯಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.