ADVERTISEMENT

ಹಾರೋಹಳ್ಳಿ | ಕ್ರೇನ್​ ಹರಿದು ಕಾರ್ಮಿಕ ಸಾವು

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 2:32 IST
Last Updated 17 ನವೆಂಬರ್ 2025, 2:32 IST
ಬಿಹಾರ ಮೂಲದ ಸೌರಭ್ ಕುಮಾರ್
ಬಿಹಾರ ಮೂಲದ ಸೌರಭ್ ಕುಮಾರ್   

ಹಾರೋಹಳ್ಳಿ: ಕ್ರೇನ್​ ಚಕ್ರ ಹರಿದು ಕೈಗಾರಿಕಾ ಪ್ರದೇಶದ ಪ್ರೊಮ್ಯಕ್ ಇಂಜಿನಿಯರಿಂಗ್ ಇಂಡಸ್ಟ್ರಿಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಸೌರಭ್ ಕುಮಾರ್ (22) ಎಂಬ ಕಾರ್ಮಿಕ ಶನಿವಾರ ಮೃತಪಟ್ಟಿದ್ದಾನೆ.

ರಾತ್ರಿ ಪಾಳಿಯಲ್ಲಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸೌರಭ್‌ ಕುಮಾರ್‌ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಕ್ರೇನ್‌ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಹಾರೋಹಳ್ಳಿ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.