ಕನಕಪುರ: ಕೇಂದ್ರ ಸರ್ಕಾರವು ಬಡವರ ಗೋಳು ಕೇಳುತ್ತಿಲ್ಲ. ಕಷ್ಟದ ಪರಿಸ್ಥಿತಿಯಲ್ಲೂ ಬಡವರ ರಕ್ತ ಹೀರಲು ಮುಂದಾಗಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಶುಕ್ರವಾರ ತಾಲ್ಲೂಕಿನಾದ್ಯಂತ ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವಂತೆ ನೀಡಿರುವ ಕರೆಗೆ ಶುಕ್ರವಾರ ಬೆಳಿಗ್ಗೆ ತಾಲ್ಲೂಕಿನಲ್ಲಿನ ಕಾಂಗ್ರೆಸ್ ಮುಖಂಡರು ಹಾಗೂ ಯೂತ್ ಕಾಂಗ್ರೆಸ್‌ನ ಪದಾಧಿಕಾರಿಗಳು ಒಟ್ಟಾಗಿ ತಮ್ಮ ಪ್ರದೇಶದಲ್ಲಿ ಇರುವ ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಹಾರೋಹಳ್ಳಿ, ಕೋಡಿಹಳ್ಳಿ, ಸಾತನೂರು, ಉಯ್ಯಂಬಳ್ಳಿ, ಮರಳವಾಡಿ ಸೇರಿದಂತೆ ಪೆಟ್ರೋಲ್ ಬಂಕ್ ಇರುವ ಎಲ್ಲಾ ಸ್ಥಳಗಳಲ್ಲೂ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.