ADVERTISEMENT

ಇನ್‌ಸ್ಪೆಕ್ಟರ್‌ ನಂದೀಶ್‌ ಸಾವು | ನ್ಯಾಯಸಮ್ಮತ ತನಿಖೆ: ಅಶ್ವತ್ಥನಾರಾಯಣ

ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 6:16 IST
Last Updated 2 ನವೆಂಬರ್ 2022, 6:16 IST
ಡಾ.ಸಿ.ಎನ್. ಅಶ್ವತ್ಥನಾರಾಯಣ
ಡಾ.ಸಿ.ಎನ್. ಅಶ್ವತ್ಥನಾರಾಯಣ   

ರಾಮನಗರ: ಇನ್‌ಸ್ಪೆಕ್ಟರ್ ನಂದೀಶ್‌ ಸಾವು ಸ್ವಾಭಾವಿಕ ಆಗಿದ್ದು, ಅದಕ್ಕೆ ಬೇರೆ ಬಣ್ಣ ಕಲ್ಪಿಸುವುದು ಬೇಡ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು

ನಂದೀಶ್‌ ₹70–80 ಲಕ್ಷ ಕೊಟ್ಟು ಈ ಹುದ್ದೆಗೆ ಬಂದಿದ್ದರು ಎಂಬ ಸಚಿವ ಎಂಟಿಬಿ ನಾಗರಾಜು ಹೇಳಿಕೆ ಕುರಿತು ಅವರು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದರು.

‘ನಂದೀಶ್‌ ಕುರಿತು ಎಂಟಿಬಿ ನಾಗರಾಜು ಮುಕ್ತವಾಗಿ ಮಾತನಾಡಿದ್ದಾರೆ. ಹಿಂದೆ ಕಾಂಗ್ರೆಸ್‌ನಲ್ಲಿ ಆ ರೀತಿ ವ್ಯವಸ್ಥೆ ಇತ್ತು. ಆದರೆ ಈಗಿನ ಸರ್ಕಾರದಲ್ಲಿ ಇಲ್ಲ. ಮುಖ್ಯಮಂತ್ರಿಗಳು ಈಗಾಗಲೇ ಉನ್ನತ ತನಿಖೆಗೆ ಆದೇಶಿಸಿದ್ದು, ನ್ಯಾಯಸಮ್ಮತ ತನಿಖೆ ನಡೆಯಲಿದೆ’ ಎಂದರು.

ADVERTISEMENT

‘ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಸಮ್ಮತ ತನಿಖೆ ನಡೆಯಲಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ರಕ್ಷಿಸುವ ಪ್ರಶ್ನೆಯೇ ಇಲ್ಲ’ ಎಂದು
ಪ್ರತಿಕ್ರಿಯಿಸಿದರು.

ಈ ಬಾರಿ ಸಚಿವ ಸಂಪುಟ ರಚನೆ ಹಾಗೂ ಸಿ.ಪಿ. ಯೋಗೇಶ್ವರ್‌ಗೆ ಅವಕಾಶ ಕುರಿತು ಮಾತನಾಡಿ ‘ಯೋಗೇಶ್ವರ್‌ಗೆ ಒಳ್ಳೆಯದಾಗಬೇಕು. ಹೀಗಾಗಿ ಅವಕಾಶ ಸಿಗಬಹುದು’
ಎಂದರು.

‘ಹೊಸ ಜಿಲ್ಲಾಸ್ಪತ್ರೆ ಕಾಮಗಾರಿಯನ್ನು ನವೆಂಬರ್ 30ರ ಒಳಗೆ ಮುಗಿಸಲು ಸೂಚಿಸಿದ್ದು, ನಂತರ ಉದ್ಘಾಟನೆಗೆ ದಿನಾಂಕ ನಿಗದಿ ಮಾಡಲಾಗುವುದು. ರಾಜೀವ್ ಗಾಂಧಿ ವಿ.ವಿ ಕ್ಯಾಂಪಸ್ ನಿರ್ಮಾಣ ಸಂಬಂಧ ಆಡಳಿತಾತ್ಮಕ ಅನುಮೋದನೆ ದೊರೆಯಬೇಕು. ಇದಕ್ಕಾಗಿ ಕಾಯುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.