ADVERTISEMENT

ರಾಮನಗರ | ಪ್ರಜಾಪ್ರಭುತ್ವದ ದಿನಾಚರಣೆ: ಉಸ್ತುವಾರಿ ಸಚಿವ, ಶಾಸಕ ಗೈರು

ಮಾನವ ಸರಪಳಿ ರಚನೆಗೆ ಡಿ.ಸಿ‌ ಚಾಲನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 5:21 IST
Last Updated 15 ಸೆಪ್ಟೆಂಬರ್ 2024, 5:21 IST
<div class="paragraphs"><p>ಮಾನವ ಸರಪಳಿ ರಚನೆಗೆ ಡಿ.ಸಿ‌ ಚಾಲನೆ</p><p></p></div>

ಮಾನವ ಸರಪಳಿ ರಚನೆಗೆ ಡಿ.ಸಿ‌ ಚಾಲನೆ

   

ರಾಮನಗರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ‌ ದಿನಾಚರಣೆ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಿರುವ ಮಾನವ ಸರಪಳಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಡಿ.ಸಿ ಯಶವಂತ್ ವಿ. ಗುರುಕರ್ ಭಾನುವಾರ ಚಾಲನೆ ನೀಡಿದರು. ಎಲ್ಲರೂ ಪರಸ್ಪರ ಕೈ ಹಿಡಿದು‌ ಮೇಲಕ್ಕೆತ್ತಿ ಪ್ರಜಾಪ್ರಭುತ್ವ ದಿನವನ್ನು ಸಂಭ್ರಮಿಸಿದರು.

ADVERTISEMENT

ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್ ಓದಿದ ಸಂವಿಧಾನ ಪೀಠಿಕೆಯನ್ನು ಎಲ್ಲರೂ ಸಾಮೂಹಿಕವಾಗಿ ಪಠಿಸಿದರು. ಇದೇ ವೇಳೆ ನಾಡಗೀತೆ ಮೊಳಗಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ದಿಗ್ವಿಜಯ್ ಬೋಡ್ಕೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಉಪ ವಿಭಾಗಾಧಿಕಾರಿ ಬಿನೋಯ್, ದಲಿತ ಸಂಘಟನೆಗಳ ಮುಖಂಡರು, ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಮತ್ತು ಸಂಘಟನೆಗಳ ಸದಸ್ಯರು ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.

ಮಾನವ ಸರಪಳಿಗೆ ಚಾಲನೆ ನೀಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಗೈರಾಗಿದ್ದರಿಂದ ಜಿಲ್ಲಾಧಿಕಾರಿಯೇ ಚಾಲನೆ ನೀಡಿದ್ದರು. ಕ್ಷೇತ್ರದ ಶಾಸಕ ಎಚ್.ಎ.‌ ಇಕ್ಬಾಲ್ ಹುಸೇನ್ ಅನುಪಸ್ಥಿತಿ ಸಹ ಎದ್ದು ಕಾಣುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.