ADVERTISEMENT

ನಾಡು, ನುಡಿ ರಕ್ಷಣೆ ಮಾಡುವುದು ಅನಿವಾರ್ಯ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2019, 12:22 IST
Last Updated 13 ನವೆಂಬರ್ 2019, 12:22 IST
ಚನ್ನಪಟ್ಟಣದ ಮಂಗಳವಾರಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು
ಚನ್ನಪಟ್ಟಣದ ಮಂಗಳವಾರಪೇಟೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು   

ಚನ್ನಪಟ್ಟಣ: ನಾಡು, ನುಡಿ, ಸಂಸ್ಕೃತಿಯನ್ನು ರಕ್ಷಣೆ ಮಾಡುವ ಚಿಂತನೆ ನಡೆಸುವುದು ಅನಿವಾರ್ಯವಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ರಾಮಕೃಷ್ಣ ಅಭಿಪ್ರಾಯಪಟ್ಟರು.

ಪಟ್ಟಣದ ಮಂಗಳವಾರಪೇಟೆಯ ಬಸವನಗುಡಿ ಆವರಣದಲ್ಲಿ ಶ್ರೀ ಬಸವೇಶ್ವರ ವಿನಾಯಕರ ಬಳಗ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ, ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾವಿರಾರು ವರ್ಷಗಳ ಗತಕಾಲದ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಗೆ ಪ್ರಪಂಚದಲ್ಲಿ ಉನ್ನತಸ್ಥಾನಮಾನವಿದೆ. ಕನ್ನಡ ಭಾಷೆಗೆ ಬಂದಿರುವ ಜ್ಞಾನಪೀಠ ಪ್ರಶಸ್ತಿಗಳೆ ಇದಕ್ಕೆ ಸಾಕ್ಷಿಯಾಗಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಮೊದಲು ಮಾತೃಭಾಷೆ ಕನ್ನಡ ಜ್ಞಾನವನ್ನು ನೀಡಲು ಮುಂದಾಗಬೇಕು. ನಂತರ ಭವಿಷ್ಯಕ್ಕೆಬೇಕಾದ ಜ್ಞಾನವನ್ನು ನೀಡಬೇಕು ಎಂದರು.

ADVERTISEMENT

ಮುಖಂಡ ಶಿವಕುಮಾರ್ ಮಾತನಾಡಿ, ಶಾಲೆಯ ಹಳೆಯ ವಿದ್ಯಾರ್ಥಿಗಳು ಒಂದುಗೂಡಿ ನಾಡಹಬ್ಬವನ್ನು ಆಚರಣೆ ಮಾಡುತ್ತಿರುವುದು ಹಾಗೂ ಇದರ ಜೊತೆಯಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಸುತ್ತಿರುವುದು ಪ್ರಶಂಸನಾರ್ಹ ಎಂದರು.

ವ್ಯಂಗ್ಯ ಚಿತ್ರಕಾರ ಅಕ್ಕೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಮಧುಸೂದನ್ ಜೋಷಿ, ಮುಖಂಡರಾದ ಗೋಪಾಲಕೃಷ್ಣ, ಕೋಟೆ ಚಂದ್ರು, ನಾಗೇಂದ್ರ, ಚಂದ್ರಶೇಖರ್, ಸತೀಶ್, ಶಂಕರ್, ಮುದ್ದುಕೃಷ್ಣ, ಬಳಗದ ಅಧ್ಯಕ್ಷ ಬಾಬು, ಖಜಾಂಚಿ ನಾಗರಾಜು, ಉಪಾಧ್ಯಕ್ಷ ದೊಡ್ಡಯ್ಯ, ಪದಾಧಿಕಾರಿಗಳಾದ ಬೋರಯ್ಯ, ಹೇಮಂತ್, ಬಸವ, ಸುಮಂತ್, ನಿಖಿಲ್, ಬೀರೇಶ್, ಅಭಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.