
ರಾಮನಗರ: ಕರ್ನಾಟಕ ಜಾನಪದ ಪರಿಷತ್ತು ಲೋಕೋತ್ಸವ ಪ್ರಯುಕ್ತ ಪ್ರತಿ ವರ್ಷ ನೀಡುವ ‘ಜಾನಪದ ಲೋಕ’ ಪ್ರಶಸ್ತಿಗೆ ಈ ಸಲ ಪರಿಷತ್ತಿನ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ ಡಾ. ಪ್ರೊ.ಹಿ. ಶಿ. ರಾಮಚಂದ್ರೇಗೌಡ ಸೇರಿದಂತೆ 19 ಮಂದಿ ಭಾಜನರಾಗಿದ್ದಾರೆ.
ಜಾನಪದ ಲೋಕದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತರ ಹೆಸರು ಪ್ರಕಟಿಸಿದ ಪರಿಷತ್ತಿನ ಅಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ, ಪ್ರಶಸ್ತಿ ₹10 ಸಾವಿರದಿಂದ ₹25 ಸಾವಿರದವರೆಗೆ ನಗದು ಹಾಗೂ ಫಲಕ ಒಳಗೊಂಡಿದೆ ಎಂದು ಹೇಳಿದರು.
ತುಮಕೂರು ಜಿಲ್ಲೆಯ ಗಣೆ ವಾದನ ಕಲಾವಿದ ಚಿಕ್ಕಣ್ಣ ಅವರಿಗೆ ನಾಡೋಜ ಡಾ. ಜಿ. ನಾರಾಯಣ ಜಾನಪದ ಲೋಕ ಪ್ರಶಸ್ತಿ ಘೋಷಿಸಲಾಗಿದೆ.
ಈ ಸಲ ಫೆ. 7 ಮತ್ತು 8ರಂದು ಜಾನಪದ ಲೋಕದಲ್ಲಿ ವಿದ್ಯಾರ್ಥಿ ಜಾನಪದ ಲೋಕೋತ್ಸವ–2026 ಕಾರ್ಯಕ್ರಮ ನಡೆಯಲಿದೆ. 8ರಂದು ಸಂಜೆ 5.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಜಾನಪದ ಲೋಕ ದತ್ತಿ ಪ್ರಶಸ್ತಿ ನಾಡೋಜ ಡಾ. ಜಿ. ನಾರಾಯಣ ಜಾನಪದ ಲೋಕ ಪ್ರಶಸ್ತಿ: ಗಣೆ ವಾದನ ಕಲಾವಿದ ಚಿಕ್ಕಣ್ಣ ತುಮಕೂರು ಜಿಲ್ಲೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.