ಮಾಗಡಿ: ತಾಲ್ಲೂಕಿನ ತಿಪ್ಪಸಂದ್ರ ಹೋಬಳಿಯ ನೇರಳೆ ಕೆರೆ ಲಕ್ಷ್ಮಿ ನರಸಿಂಹ ಸ್ವಾಮಿ ಜಯಂತೋತ್ಸವ ಅದ್ದೂರಿಯಾಗಿ ನೆರವೇರಿತು.
ನರಸಿಂಹಸ್ವಾಮಿ ಜಯಂತಿ ಅಂಗವಾಗಿ ಬೆಳಿಗ್ಗೆಯಿಂದ ಸ್ವಾಮಿಗೆ ವಿಶೇಷ ಪೂಜೆ ನಡೆಯಿತು. ಜೊತೆಗೆ ಸ್ವಾಮಿಯನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು.
ಶಾಸಕ ಎಚ್.ಸಿ.ಬಾಲಕೃಷ್ಣ ಅವರು ತಮ್ಮ ಮನೆ ದೇವರಾದ ಲಕ್ಷ್ಮಿ ನರಸಿಂಹ ಸ್ವಾಮಿಗೆ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಗ್ರಾಮದಲ್ಲಿ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.