ADVERTISEMENT

ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಎಚ್‌ಡಿಕೆ ಭೇಟಿ: ಸ್ಥಳೀಯರಿಗೆ ಆದ್ಯತೆ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 3:59 IST
Last Updated 23 ಆಗಸ್ಟ್ 2022, 3:59 IST
ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಶಾಸಕ ಎ.ಮಂಜುನಾಥ ಜೊತೆಗಿದ್ದರು
ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು. ಶಾಸಕ ಎ.ಮಂಜುನಾಥ ಜೊತೆಗಿದ್ದರು   

ರಾಮನಗರ: ರಾಜ್ಯದಲ್ಲಿರುವ ಕೈಗಾರಿಕೆಗಳು ಉದ್ಯೋಗ ನೀಡುವಾಗ ಕನ್ನಡಿಗ ಪ್ರತಿಭಾವಂತ ಯುವಜನರನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಘಟಕಕ್ಕೆ ಸೋಮವಾರ ಭೇಟಿ ನೀಡಿ ಕಂಪನಿಯ ಉನ್ನತ ಅಧಿಕಾರಿಗಳ ಜತೆ ಅವರು ಸಮಾಲೋಚನೆ ನಡೆಸಿದರು. ಕಂಪನಿಯಲ್ಲಿ ಸ್ಥಳೀಯ ಪ್ರತಿಭಾವಂತರಿಗೆ ಯಾವುದೇ ಕಾರಣಕ್ಕೂ ಅನ್ಯಾಯ ಆಗಬಾರದು. ಅನಗತ್ಯವಾಗಿ ಹೊರರಾಜ್ಯದವರನ್ನು ಕರೆತಂದು ತುಂಬಿಸಬಾರದು ಎಂದು ಕಿವಿಮಾತು ಹೇಳಿದರು.

ರಾಜ್ಯದಲ್ಲಿ ಅತ್ಯುತ್ತಮ ಗುಣಮಟ್ಟದ ತಾಂತ್ರಿಕ ಶಿಕ್ಷಣ ವ್ಯವಸ್ಥೆ ಇದ್ದು, ಪ್ರತಿಭಾವಂತ ಮಾನವ ಸಂಪನ್ಮೂಲ ಲಭ್ಯವಿದೆ. ಹೀಗಾಗಿ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಬೇಕು ಎಂದರು.

ADVERTISEMENT

ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಶಾಸಕರಾದ ಮಂಜುನಾಥ್, ಬಿಡದಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಾಜು ಕೇತ್ಕಲೆ ಮತ್ತು ಸ್ವಪ್ನೇಶ್ ಮಾರು, ಉಪಾಧ್ಯಕ್ಷರಾದ ಶಂಕರ್ ಮತ್ತು ವಿನಯ್ ಹಾಗೂ ಕಾರ್ಯನಿರ್ವಾಹಕ ಸಲಹೆಗಾರ ಪರಶುರಾಮ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.