ADVERTISEMENT

ಕೇತಗಾನಹಳ್ಳಿಯಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಆರಂಭ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 7:54 IST
Last Updated 27 ಸೆಪ್ಟೆಂಬರ್ 2021, 7:54 IST
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರಜಾವಾಣಿ ಪತ್ರಿಕೆ ಓದುವುದರಲ್ಲಿ ತಲ್ಲೀನರಾಗಿದ್ದರು
ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಪ್ರಜಾವಾಣಿ ಪತ್ರಿಕೆ ಓದುವುದರಲ್ಲಿ ತಲ್ಲೀನರಾಗಿದ್ದರು   

ರಾಮನಗರ; ಬಿಡದಿಯ ಕೇತಗಾನಹಳ್ಳಿಯ ಕುಮಾರಸ್ವಾಮಿ ಅವರ ತೋಟದ ಆವರಣದಲ್ಲಿ ಸೋಮವಾರ ಜೆಡಿಎಸ್ ಸಂಘಟನಾ ಕಾರ್ಯಾಗಾರಕ್ಕೆ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಚಾಲನೆ ನೀಡಿದರು‌.

ಪಕ್ಷದ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, 'ಕಾರ್ಯಾಗಾರದಲ್ಲಿ 123 ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ‌. ಇವರಿಗೆ ಗ್ರೀನ್ ಕಾರ್ಡ್ ವಿತರಣೆ ಮಾಡಲಾಗುವುದು. ಮುಂದಿನ ಜನವರಿವರೆಗೆ ಅವರ ಕಾರ್ಯಗಳನ್ನು ನೋಡಿ ನಂತರ ಟಿಕೆಟ್ ಬಗ್ಗೆ ಅಂತಿಮವಾಗಿ ತೀರ್ಮಾನಿಸಲಾಗುವುದು' ಎಂದರು.

'ನಮ್ಮ ಪಕ್ಷದಿಂದ ಶಕ್ತಿ ಪಡೆದುಕೊಂಡು ಬೇರೆ ಬೇರೆ ಪಕ್ಷಕ್ಕೆ ಹೋಗಿ ಮುಖ್ಯಮಂತ್ರಿ ಆಗಿದ್ದಾರೆ‌‌. ನಮ್ಮ ಪಕ್ಷದಿಂದಲೇ ಬೆಳೆದ ನಾಯಕರೊಬ್ಬರು ನಮ್ಮ ಪಕ್ಷದ ವಿರುದ್ಧವೇ ಮಾತನಾಡುತ್ತಾರೆ' ಎಂದು ಟೀಕಿಸಿದರು.

ADVERTISEMENT

'ಮುಂದಿನ 17 ತಿಂಗಳು ನಿರಂತರವಾಗಿ ಪಕ್ಷದ ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.