ADVERTISEMENT

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ ಸ್ಪರ್ಧೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2022, 9:17 IST
Last Updated 7 ಮಾರ್ಚ್ 2022, 9:17 IST
   

ರಾಮನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಈ ಬಗ್ಗೆ ಎರಡೂ ರಾಜಕೀಯ ಪಕ್ಷಗಳು ಗಾಳಿ ಸುದ್ದಿ ಹಬ್ಬಿಸುತ್ತಿವೆ. ಈವರೆಗೂ ನಮ್ಮ ಪಕ್ಷದಿಂದ ಯಾರ ಮನೆ ಬಾಗಿಲಿಗೂ ಹೋಗಿಲ್ಲ. ಅವರೇ ಬೇಕಾದಾಗ ನಮ್ಮ ಮನೆಗೆ ಬಂದು ಕಾಲು ಹಿಡಿದುಕೊಂಡಿದ್ದಾರೆ. ಬಿಜೆಪಿಯವರು ಏನು ಸಾಧನೆ ಮಾಡಿದ್ದಾರೆ ಎಂದು ಅವರ ಜೊತೆ ಕೈಜೋಡಿಸೋಣ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT