ADVERTISEMENT

ದಸರಾ ಕ್ರೀಡಾಕೂಟ: ಕದಂಬ ಸ್ಪೋರ್ಟ್ಸ್‌ಗೆ 34 ಪದಕ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 2:22 IST
Last Updated 20 ಆಗಸ್ಟ್ 2025, 2:22 IST
ಕನಕಪುರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾಗಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕದಂಬ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್‌ನ ಕ್ರೀಡಾಪಟುಗಳು
ಕನಕಪುರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾಗಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ಕದಂಬ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್‌ನ ಕ್ರೀಡಾಪಟುಗಳು   

ಕನಕಪುರ: ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕದಂಬ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್‌ನ ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚು ಸೇರಿದಂತೆ 34 ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.

ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ದಸರಾ ಕ್ರೀಡಾಕೂಟದಲ್ಲಿ ಕದಂಬ ಸ್ಪೋರ್ಟ್ಸ್‌ನ ಕ್ರೀಡಾಪಟುಗಳು 25 ಚಿನ್ನದ ಪದಕ, 8 ಬೆಳ್ಳಿ ಮತ್ತು 1 ಕಂಚಿನ ಪದಕ ಗೆದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕ್ರೀಡಾಪಟುಗಳನ್ನು ಕದಂಬ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್‌ನ ಅಧ್ಯಕ್ಷ ವಿನಾಯಕ್, ಉಪಾಧ್ಯಕ್ಷ ಮಧುಸೂಧನ್, ನಿರ್ದೇಶಕರಾದ ಸಂತೋಷ್, ಸುನಿಲ್ ಕುಮಾರ್ ಮತ್ತು ತರಬೇತುದಾರ ಪ್ರಕಾಶ್ ಸತ್ಕರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.